ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 APRIL 2024
ELECTION NEWS : ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಏ.26ರಂದು ಮೊದಲ ಹಂತ ಮತ್ತು ಎರಡನೆ ಹಂತ ಮೇ 7ರಂದು ವೇತನ ಸಹಿತ ಸಾವ್ರರ್ತಿಕ ರಜೆ ಘೋಷಿಸಲಾಗಿದೆ. ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ರಾಜ್ಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯಿದೆ 1951 ಹಾಗೂ ನೆಗೋಶಬಲ್ ಇನ್‌ಸ್ಟ್ರುಮೆಂಟ್ ಆ್ಯಕ್ಟ್- 1881ರ ಪ್ರಕಾರ ವೇತನಸಹಿತ ರಜೆ ನೀಡಲು ಆದೇಶಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ರಾಜ್ಯ ಶಿಷ್ಟಾಚಾರ) ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಮತ್ತಷ್ಟು ಹೆಚ್ಚಲಿದೆ ಧಗೆ, ರಾಜ್ಯಕ್ಕೆ ಆತಂಕಕಾರಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್‌ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















