SHIMOGA NEWS, 25 OCTOBER 2024 : ಗೃಹ ಸಚಿವ (Home Minister) ಡಾ. ಜಿ.ಪರಮೇಶ್ವರ್ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಅ.26 ಮತ್ತು 27ರಂದು ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅ.26ರಂದು ಬೆಳಗ್ಗೆ 11.30ಕ್ಕೆ ಶಿವಮೊಗ್ಗದ ಸರ್ಕ್ಯುಟ್ ಹೌಸ್‌ಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಡಿಎಆರ್ ಆವರಣದಲ್ಲಿ ನಿರ್ಮಿಸಿರುವ ಪೊಲೀಸ್ ಸಮುದಾಯ ಭವನ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಡಿಎಆರ್ ಸಭಾಂಗಣದಲ್ಲಿ ಜಿಲ್ಲಾ ಅಪರಾಧ ವಿಮರ್ಶನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ » ಬಾನೆಟ್ ಮೇಲೆ ಕಾನ್‌ಸ್ಟೇಬಲ್‌ನನ್ನು ಹೊತ್ತೊಯ್ದ ಚಾಲಕ ಅರೆಸ್ಟ್
ಸಂಜೆ 4.30ಕ್ಕೆ ಶಿವಮೊಗ್ಗದಿಂದ ಸೊರಬಕ್ಕೆ ರಸ್ತೆ ಮಾರ್ಗದಲ್ಲಿ ತೆರಳಲಿದ್ದಾರೆ. ಸಂಜೆ 6 ಗಂಟೆಗೆ ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಅ.27ರ ಬೆಳಗ್ಗೆ 6.30ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗ್ಗೆ 9.30ಕ್ಕೆ ತುಮಕೂರು ತಲುಪಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200