ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Published On : ಮಾರ್ಚ್ 17, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: 2026-27ನೇ ಸಾಲಿಗೆ ತೋಟಗಾರಿಕೆ (horticulture) ಇಲಾಖೆಯ ಅಧೀನದಲ್ಲಿರುವ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ಹತ್ತು ತಿಂಗಳ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ತರಬೇತಿಯು 2026 ಮೇ 2 ರಿಂದ 2027ರ ಫೆಬ್ರವರಿ 28 ರವರೆಗೆ ನಡೆಯಲಿದೆ. ವೈಜ್ಞಾನಿಕ ತೋಟಗಾರಿಕೆ ಪದ್ಧತಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ತಂದೆ/ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಮತ್ತು ಸ್ವಂತ ಸಾಗುವಳಿ ಮಾಡುತ್ತಿರಬೇಕು. ಅರ್ಜಿಯೊಂದಿಗೆ ಜಮೀನಿನ ಪಹಣಿ (RTC) ಸಲ್ಲಿಸುವುದು ಕಡ್ಡಾಯವಾಗಿದೆ.

ಆಸಕ್ತರು ಏಪ್ರಿಲ್ 13 ರವರೆಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://horticulturedir.karnataka.gov.in ಮೂಲಕ ಅರ್ಜಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ಶಿವಮೊಗ್ಗದ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಆಯಾ ತಾಲ್ಲೂಕಿನ ತೋಟಗಾರಿಕೆ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಬಹುದು. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್ 15.

ಇದನ್ನೂ ಓದಿ – ₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ಹೆಚ್ಚಿನ ಮಾಹಿತಿಗಾಗಿ ಆಸಕ್ತರು ದೂರವಾಣಿ ಸಂಖ್ಯೆ: 08182-222794 ಅಥವಾ ಮೊಬೈಲ್: 9686950460 ಅನ್ನು ಸಂಪರ್ಕಿಸಬಹುದೆಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 17, 2026

Leave a Comment