SHIMOGA, 15 AUGUST 2024 : 78ನೇ ಸ್ವಾತಂತ್ರ್ಯ ದಿನಾಚರಣೆ (Independence Day) ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಧ್ವಜಾರೋಹಣ ನೆರವೇರಿಸಲಾಯಿತು. ಎಲ್ಲೆಲ್ಲಿ ಯಾರು ಧ್ವಜಾರೋಹಣ ಮಾಡಿದರು? ಯಾರೆಲ್ಲ ಏನೆಲ್ಲ ಹೇಳಿದರು? ಇಲ್ಲಿದೆ ಫಟಾಫಟ್ ಅಪ್ಡೇಟ್.
ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ
ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಧ್ವಜ ವಂದನೆ, ಪಥ ಸಂಚಲನ ನಡೆಯಿತು. ವಿವಿಧ ಶಾಲೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಳಿಕ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದ ಜನರನ್ನು ಉದ್ದೇಶಿಸಿ ಮಾತನಾಡಿದರು.
![]() |
ಭದ್ರಾವತಿಯಲ್ಲಿ ಧ್ವಜಾರೋಹಣ
ಭದ್ರಾವತಿಯ ಹಳೆ ನಗರದ ಕನಕ ಮಂಟಪ ಮೈದಾನದಲ್ಲಿ ತಹಶೀಲ್ದಾರ್ ನಾಗರಾಜ್ ಧ್ವಜಾರೋಹಣ ಮಾಡಿದರು. ಶಾಸಕ ಸಂಗಮೇಶ್ವರ್ ಮತ್ತು ತಹಶೀಲ್ದಾರ್ ನಾಗರಾಜ್ ಅವರು ಧ್ವಜ ವಂದನೆ ಸ್ವೀಕರಿಸಿದರು.
ತೀರ್ಥಹಳ್ಳಿಯಲ್ಲಿ ಧ್ವಜಾರೋಹಣ
ಯು.ಆರ್.ಅನಂತಮೂರ್ತಿ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್ ಜಕ್ಕಣ್ಣಗೌಡರ್ ಧ್ವಜಾರೋಹಣ ನೆರವೇರಿಸಿದರು. ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿಯಿಂದ ಪಥ ಸಂಚಲನ ನಡೆಯಿತು. ಶಾಸಕ ಆರಗ ಜ್ಞಾನೇಂದ್ರ, ಡಿವೈಎಸ್ಪಿ ಗಜಾನನ ವಾಮನ ಸುತಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿಕಾರಿಪುರದಲ್ಲಿ ಧ್ವಜಾರೋಹಣ
ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಪಥ ಸಂಚಲನ ನಡೆಯಿತು.
ಹೊಸನಗರದಲ್ಲಿ ಧ್ವಜಾರೋಹಣ
ಹೊಸನಗರದ ನೆಹರು ಕ್ರೀಡಾಂಗಣದಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಧ್ವಜಾರೋಹಣ ಮಾಡಿದರು. ಪೊಲೀಸರು, ಗೃಹ ರಕ್ಷಕ ದಳ, ಶಾಲೆ, ಕಾಲೇಜು ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿದರು. ಇದೆ ವೇಳೆ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ಮೆಸ್ಕಾಂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.
ಸಾಗರದಲ್ಲಿ ಧ್ವಜಾರೋಹಣ
ಸಾಗರದ ನೆಹರು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಉಪ ವಿಭಾಗದ ಸಹಾಯಕ ಆಯುಕ್ತ ಆರ್.ಯತೀಶ್ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸ್, ಗೃಹ ರಕ್ಷಕ ದಳ, ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸೊರಬದಲ್ಲಿ ಧ್ವಜಾರೋಹಣ
ಸೊರಬದ ರಂಗಮಂದಿರ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಹಶೀಲ್ದಾರ್ ಮಂಜುಳಾ ಧ್ವಜಾರೋಹಣ ಮಾಡಿದರು. ಪೊಲೀಸರು, ಗೃಹ ರಕ್ಷಕ ದಳ, ಶಾಲೆ ಮಕ್ಕಳಿಂದ ಪಥ ಸಂಚಲನ ನಡೆಯಿತು.
ಇದನ್ನೂ ಓದಿ ⇒ ಶಿವಮೊಗ್ಗ ಸಿಟಿಯ 15 ಕಿ.ಮೀ ವ್ಯಾಪ್ತಿಯಲ್ಲಿವೆ 10 ಪ್ರಮುಖ ಪಿಕ್ನಿಕ್ ತಾಣಗಳು, ಇಲ್ಲಿದೆ ಲಿಸ್ಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200