ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಆಗಸ್ಟ್ 2020
ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಹೆಚ್ಚಾದಂತೆ ಜಲಾಶಯಗಳಿಗೆ ನೀರಿನ ಒಳಹರಿವು ಏರಿಕೆಯಾಗುತ್ತಿದೆ. ತುಂಗಾ ಜಲಾಶಯದಿಂದ ಮಾತ್ರ ಸದ್ಯಕ್ಕೆ ನೀರು ಹೊರ ಬಿಡಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾವ್ಯಾವ ಜಲಾಶಯದ ಒಳ, ಹೊರ ಹರಿವೆಷ್ಟು?
ತುಂಗಾ ಜಲಾಶಯ | ಸದ್ಯ 21 ಗೇಟ್ಗಳನ್ನು ತೆಗೆದು ತುಂಗಾ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ತುಂಗಾ ಜಲಾಶಯಕ್ಕೆ 67 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. 68 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ.
ಭದ್ರಾ ಜಲಾಶಯ | ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳವಾಗುತ್ತಿದೆ. ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಜಲಾಶಯದ ನೀರಿನ ಮಟ್ಟ 159.50 ಅಡಿಗೆ ಏರಿಕೆಯಾಗಿತ್ತು. 35,875 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿತ್ತು. ಮಳೆ ಪ್ರಮಾಣ ಹೆಚ್ಚಳದಿಂದಾಗಿ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸುಮಾರು 70 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಿಂಗನಮಕ್ಕಿ ಡ್ಯಾಂ | ಇತ್ತ ಲಿಂಗನಮಕ್ಕಿ ಜಲಾಶಯಕ್ಕೂ ಭಾರಿ ಪ್ರಮಾಣದ ನೀರು ಒಳಹರಿವು ಇದೆ. 84,806 ಕ್ಯೂಸೆಕ್ ನೀರು ಒಳಹರಿವು ಇದೆ. ಇವತ್ತು ಜಲಾಶಯದ ನೀರಿನ ಮಟ್ಟ 1782 ಅಡಿಯಷ್ಟಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]