ಭದ್ರಾವತಿ : ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಇದರಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಕಳೆದ ರಾತ್ರಿ ಭದ್ರಾವತಿಯಲ್ಲಿ ದಿಢೀರ್ ರಸ್ತೆ ತಡೆ (Road Block) ನಡೆಸಿದರು. ಈ ಸಂದರ್ಭ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಯಿತು.
ನಗರಸಭೆ ಸಮೀಪ ತರೀಕೆರೆ ರಸ್ತೆಯಲ್ಲಿ ಹೆಚ್.ಎಸ್.ಪ್ರಮೋದ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ.
![]() |
ಮೂರು ಬೈಕು, ಆರು ಯುವಕರು
ರಾತ್ರಿ ಬಸ್ ನಿಲ್ದಾಣದ ಕಡೆಯಿಂದ ಬೈಕಿನಲ್ಲಿ ಪ್ರಮೋದ್ ತಮ್ಮ ಮನೆಗೆ ತೆರಳುತ್ತಿದ್ದರು. ನಗರಸಭೆ ಸಮೀಪ ತಿರುವಿನಲ್ಲಿ ಬೈಕಿನಲ್ಲಿ ಬಂದ ಯುವಕರು ಪ್ರಮೋದ್ ಅವರನ್ನು ಅಡ್ಡಗಟ್ಟಿದ್ದಾರೆ. ಹಿಂಬದಿಯಿಂದ ಅವರ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ನಡೆಸಲಾಗಿದೆ. ಈ ಸಂದರ್ಭ ಪ್ರಮೋದ್ ಕೊರಳಲ್ಲಿದ್ದ ಚಿನ್ನದ ಸರವನ್ನು ಕೂಡ ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?
ಆರು ಯುವಕರು ಮೂರು ಬೈಕ್‌ನಲ್ಲಿ ಪ್ರಮೋದ್ ಅವರನ್ನು ಹಿಂಬಾಲಿಸಿಕೊಂಡು ಬಂದು ಕೃತ್ಯ ಎಸಗಿದ್ದಾರೆ ಎಂದು ಪ್ರಮೋದ್ ಆರೋಪಿಸಿದ್ದಾರೆ.
ದಿಢೀರ್ ರಸ್ತೆ ತಡೆ, ಆಕ್ರೋಶ
ಘಟನೆ ಬೆನ್ನಿಗೆ ಜೆಡಿಎಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ, ದಿಢೀರ್ ರಸ್ತೆ ತಡೆ (Road Block) ನಡೆಸಿದರು. ಹಲ್ಲೆಕೋರರನ್ನು ಬಂಧಿಸಬೇಕು, ಭದ್ರವತಿಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ತಡೆಯೊಡ್ಡಬೇಕು ಎಂದು ಪಟ್ಟು ಹಿಡಿದರು.
ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿಗೌಡ, ಪ್ರಮುಖರಾದ ಅಜಿತ್ ಗೌಡ ಸೇರಿ ಹಲವರು ರಸ್ತೆ ತಡೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ಜೆಡಿಎಸ್ ಮುಖಂಡರು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಹಳೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಮೋದ್ ದೂರು ನೀಡಿದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200