ಶಿವಮೊಗ್ಗ : ಸಾಫ್ಟ್ವೇರ್ (Software) ಕಂಪನಿಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನಕಲಿ ಆದೇಶ ಕಾಪಿ ನೀಡಿ ಶಿವಮೊಗ್ಗದ ಯುವಕನೊಬ್ಬನಿಗೆ (ಹೆಸರು ಗೌಪ್ಯ) 2.10 ಲಕ್ಷ ರೂ. ವಂಚಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯುವಕನ ಸ್ನೇಹಿತನೊಬ್ಬನ ಕಡೆಯಿಂದ ಹೈದರಾಬಾದ್ನ ಮಹೇಶ್ ಎಂಬಾತನ ಪರಿಚಯವಾಗಿತ್ತು. ಆತ ಯುವಕನಿಗೆ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಹಂತ ಹಂತವಾಗಿ ಹಣ ಪಡೆದು 2023ರ ಡಿಸೆಂಬರ್ನಲ್ಲಿ ಸಾಫ್ಟ್ವೇರ್ (Software) ಕಂಪನಿಯೊಂದರಲ್ಲಿ ನೇಮಕಾತಿ ಪತ್ರ ಕಳುಹಿಸಿದ್ದ.
ಪರಿಶೀಲಿಸಿದಾಗ ಕಾದಿತ್ತು ಶಾಕ್

ಪರಿಶೀಲಿಸಿದಾಗ ಆ ನೇಮಕಾತಿ ಆದೇಶ ನಕಲಿ ಎಂಬುದು ಯುವಕನಿಗೆ ಗೊತ್ತಾಗಿತ್ತು. ಈ ಹಿನ್ನೆಲೆ ಮಹೇಶ್ಗೆ ಕರೆ ಮಾಡಿ ಹಣ ಹಿಂತಿರುಗಿಸುವಂತೆ ತಿಳಿಸಿದ್ದ. ಆದರೆ ಈವರೆಗು ಆತ ಹಣ ಹಿಂತಿರುಗಿಸದ ಹಿನ್ನೆಲೆ ಯುವಕ ದೂರು ನೀಡಿದ್ದಾನೆ.
ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಲೋಗೋ ರಿಲೀಸ್, ಕಡಿಮೆ ವೆಚ್ಚದಲ್ಲಿ ಹೈಟೆಕ್ ಟ್ರೀಟ್ಮೆಂಟ್, ವೈದ್ಯರು ಹೇಳಿದ್ದೇನು?
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






