ದಸರಾ ಸುದ್ದಿ: ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಲ್ಲಿ (Palace) ಕಲಾ ದಸರಾಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಛಾಯಾಚಿತ್ರ ಪದರ್ಶನ, ಮಕ್ಕಳ ಪೇಂಟಿಂಗ್, ಬೊಂಬೆ ಪ್ರದರ್ಶನ ಮಾಡಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ಛಾಯಾಗ್ರಾಹಕರು ತೆಗೆದ ಫೋಟೋಗಳನ್ನು ಪ್ರದರ್ಶಿಸಲಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಛಾಯಾಚಿತ್ರಗಳನ್ನು ವೀಕ್ಷಿಸಿದರು.
ಇನ್ನು, ಅರಮನೆಯ ಮೇಲ್ಭಾಗದಲ್ಲಿ ಪೇಂಟಿಂಗ್ ಪ್ರದರ್ಶನ ಮಾಡಲಾಗಿದೆ. ಅರಮನೆ ಅವರಣದಲ್ಲಿ ರಾಧಿಕಾ ಜಗದೀಶ್ ಅವರು ದಸರಾ ಬೊಂಬೆಗಳ ಪ್ರದರ್ಶಿಸಿದ್ದಾರೆ. ಇದೇ ಮೊದಲ ಬಾರಿ ಗೊಂಬೆ ಪ್ರದರ್ಶನ ಮಾಡಲಾಗಿದೆ. ಪಟ್ಟದ ಗೊಂಬೆ, ಅರಿಷಿಣ ಕುಟ್ಟಿವ ಗೊಂಬೆ, ಅರಮನೆ, ಅಂಬಾರಿ, ಚನ್ನಪಟ್ಟಣ ಗೊಂಬೆಗಳು, ದಶಾವತಾರ, ಅಷ್ಟಲಕ್ಷ್ಮಿ , ನವದುರ್ಗೆ, ರಾಮಮಂದಿರ, ಕಾಡು, ವನ್ಯಜೀವಿಗಳು, ಪ್ರಾಣಿಗಳ ರಕ್ಷಣೆ, ಫೈಬರ್ ಸರ್ಪವನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ.

ಯಾರೆಲ್ಲ ಏನೆಲ್ಲ ಹೇಳಿದರು?
ದಸರಾ ಅಂದರೆ ಮೈಸೂರಿನ ಬಗ್ಗೆ ಮಾತ್ರ ಚರ್ಚೆಯಾಗುತ್ತದೆ. ಶಿವಮೊಗ್ಗ ದಸರಾ ಸಹ ಅತ್ಯಂತ ವಿಭಿನ್ನವಾಗಿ, ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಪ್ರವಾಸೋದ್ಯಮ ದಿನದ ಹಿನ್ನೆಲೆ ಛಾಯಾಚಿತ್ರ ಪ್ರದರ್ಶಿಸಲಾಗುತ್ತಿದೆ. ಮಕ್ಕಳು ಹೆಚ್ಚಾಗಿ ಉತ್ಸವದಲ್ಲಿ ಭಾಗವಹಿಸಬೇಕು.
- ಗುರುದತ್ತ ಹೆಗಡೆ, ಜಿಲ್ಲಾಧಿಕಾರಿ
![]()
ಮೈಸೂರು ದಸರಾ ಬಳಿಕ ಶಿವಮೊಗ್ಗ ದಸರಾ ಅತ್ಯಂತ ವಿಜೃಂಭಣೆಯಿಂದ ನಡೆಯುತ್ತದೆ. ಮುಂದೆ ಮತ್ತಷ್ಟು ಯಶಸ್ವಿಯಾಗಿ ನಡೆಯಲಿದೆ. ದೈವ ಇಚ್ಛೆಯಿಂದ ನಾನು ನಾಲ್ಕನೇ ದಸರಾದಲ್ಲಿ ಭಾಗಿಯಾಗಿದ್ದೇನೆ.
- ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ
![]()
ಇದನ್ನೂ ಓದಿ » ಶಿವಮೊಗ್ಗದಲ್ಲಿ ಆನೆಗಳನ್ನು ನೋಡಲು ತಂಡೋಪತಂಡವಾಗಿ ಜನ ಆಗಮನ
ಶಾಸಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುಜೀಬ್ ಸೇರಿದಂತೆ ಹಲವರು ಇದ್ದರು.







Kala Dasara in Shimoga Palace
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






