ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 11 AUGUST 2024 : ಕರಾವಳಿ ಭಾಗದ ಜನಪದ ಸ್ಪರ್ಧೆ ಕಂಬಳವನ್ನು ಇದೇ ಮೊದಲ ಬಾರಿ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತಿದೆ. ಪ್ರಸಕ್ತ ಋತವಿನ ಕಂಬಳ ಸ್ಪರ್ಧೆಯ ವೇಳಾಪಟ್ಟಿಯನ್ನು (Time Table) ಕಂಬಳ ಸಮಿತಿ ಪ್ರಕಟಿಸಿದೆ. ಕರಾವಳಿ ಭಾಗದಲ್ಲಿ ಮಾತ್ರವಲ್ಲದೆ ಈ ಬಾರಿ ಬೆಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿಯು ಕಂಬಳ ಆಯೋಜಿಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೂಡುಬಿದರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ, ಆ.26 ರಿಂದ ಏಪ್ರಿಲ್ 19ರವರೆಗೆ ವಿವಿಧೆಡೆ 26 ಕಂಬಳ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಶಿವಮೊಗ್ಗದಲ್ಲಿ ಯಾವಾಗ ಕಂಬಳ?
ಕರಾವಳಿ ಹೊರತು ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ಅಕ್ಟೋಬರ್ 26ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದೆ. 2025ರ ಏಪ್ರಿಲ್ 19ರಂದು ಶಿವಮೊಗ್ಗದಲ್ಲಿ ಸ್ಪರ್ಧೆ ನಡೆಯಲಿದೆ. ಶಿವಮೊಗ್ಗದಲ್ಲಿ ನಡೆಯುವ ಕಂಬಳ ಪ್ರಸಕ್ತ ಋತುವಿನ ಕೊನೆಯ ಕಂಬಳ ಸ್ಪರ್ಧೆಯಾಗಿರಲಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
ಶಿವಮೊಗ್ಗ ಸಮಿತಿಗೆ ಸದಸ್ಯತ್ವ
ಕಂಬಳ ಸಮಿತಿ ಮಹಾಸಭೆಯಲ್ಲಿ ಶಿವಮೊಗ್ಗ ಸಮಿತಿಗೆ ಸದಸ್ಯತ್ವ ನೀಡಲಾಯಿತು. ಇದೇ ವೇಳೆ ಮಾತನಾಡಿದ ಶಿವಮೊಗ್ಗ ಕಂಬಳ ಸಮಿತಿಯ ಎಲ್ಯಾಸ್ ಲೂಯಿಸ್, ಕಾಂತಾರಾ ಸಿನಿಮಾದ ಬಳಿಕ ಶಿವಮೊಗ್ಗದಲ್ಲಿ ಕಂಬಳ ಕುರಿತು ಜನರಲ್ಲಿ ಆಸಕ್ತಿ ಮೂಡಿದೆ. ವಿವಿಧ ಸಂಸ್ಥೆಗಳು, ಪ್ರಮುಖರು ಕಂಬಳ ನಡೆಸಲು ಆಸಕ್ತಿ ತೋರಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಹೈಕೋರ್ಟ್ ನ್ಯಾಯಾಧೀಶರಿಗೆ ಪೂರ್ಣ ಕುಂಭ ಸ್ವಾಗತ, ಸಮ್ಮೇಳನದಲ್ಲಿ ಪ್ರಮುಖ ವಿಚಾರ ಚರ್ಚೆ