ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಸೊರಬ: ತಾಲೂಕಿನ ಐತಿಹಾಸಿಕ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ (Offering) ಹುಂಡಿಯ ಎಣಿಕೆ ಕಾರ್ಯ ಈಚೆಗೆ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ನಡೆಯಿತು.
ತಹಶೀಲ್ದಾರ್ ಮಂಜುಳಾ ಹೆಗಡಾಳ್ ಸಮ್ಮುಖದಲ್ಲಿ ದೇವಸ್ಥಾನಕ್ಕೆ ಶ್ರಾವಣ, ದಸರಾ, ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ಭಕ್ತರು ನೀಡಿದ್ದ ಕಾಣಿಕೆಯನ್ನು ಎಣಿಕೆ ಮಾಡಲಾಯಿತು. ಈ ಬಾರಿ ಹುಂಡಿಯಲ್ಲಿ ₹40,93,720 ಕಾಣಿಕೆ ಸಂಗ್ರಹವಾಗಿದೆ.
ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿ.ಸಿ.ಟಿ.ವಿ ಕ್ಯಾಮೆರಾ ಆಳವಡಿಸಲಾಗಿತ್ತು. ಹುಂಡಿ ಎಣಿಕೆ ಕಾರ್ಯದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಜಿ.ಕೆ.ಪ್ರಮೀಳಾ ಕುಮಾರಿ, ಶಿರಸ್ತೇದಾರ್ ನಾಗರತ್ನ, ನಾಡಕಚೇರಿ ಉಪ ತಹಶೀಲ್ದಾರ್ ಲಲಿತಾ, ಚಂದ್ರಗುತ್ತಿ ರಾಜಸ್ವ ನಿರೀಕ್ಷಕ ಉಮೇಶ್, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ. ಶೃತಿ, ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ಸಂಜಯ್ ಸೇರಿ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿ ಪಾಲ್ಗೊಂಡಿದ್ದರು.

ಇದನ್ನೂ ಓದಿ » ರಿಪ್ಪನ್‌ಪೇಟೆಯಲ್ಲಿ ರಂಭಾಪುರಿ ಶ್ರೀ ಆಶೀರ್ವಚನ, ಏನೆಲ್ಲ ಹೇಳಿದರು? ಇಲ್ಲಿದೆ ಪಾಯಿಂಟ್ಸ್






