ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 10 OCTOBER 2024 : ‘ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡʼ ಅಭಿಯಾನದ ಅಂಗವಾಗಿ ನಡೆಯುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯು (Rathayatre) ಅ.11 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ.
ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 2023ರ ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಂಡಿದೆ. ಈ ಹಿನ್ನೆಲೆ ಕನ್ನಡ ಜ್ಯೋತಿ ರಥೆಯಾತ್ರೆ ನಡೆಸಲಾಗುತ್ತಿದೆ. 2023ರ ನ.2 ರಂದು ವಿಜಯನಗರ ಜಿಲ್ಲೆಯ ಹಂಪೆಯಲ್ಲಿ ರಥಾಯಾತ್ರೆಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದರು. ರಾಜ್ಯದ್ಯಾಂತ ಎಲ್ಲಾ ಜಿಲ್ಲೆಗಳಲ್ಲಿಯು ರಥಯಾತ್ರೆ ಸಂಚರಿಸುತ್ತಿದೆ. ಶಿವಮೊಗ್ಗ ಜಿಲ್ಲೆಗೆ ಅ.11 ರಂದು ಆಗಮಿಸಲಿದೆ.
ಜಾನಪದ ಕಲಾತಂಡಗಳು ರಥಯಾತ್ರೆಯನ್ನು ಸ್ವಾಗತಿಸಲಿದೆ. ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು, ವಿದ್ಯಾ ಸಂಸ್ಥೆಗಳು, ಸ್ತ್ರೀ ಶಕ್ತಿ ಸಂಘಟನೆಗಳು ಭಾಗವಹಿಸಿ, ಬೀಳ್ಕೊಡಲಾಗುವುದು. ಅ.11 ರಂದು ಹೊಸನಗರ, ಅ.13 ರಂದು ತೀರ್ಥಹಳ್ಳಿ, ಅ.14 ರಂದು ಭದ್ರಾವತಿ, ಅ.15 ರಂದು ಶಿವಮೊಗ್ಗ, ಅ.16 ರಂದು ಶಿಕಾರಿಪುರ, ಅ.17 ರಂದು ಸೊರಬ ಮತ್ತು ಅ.18 ರಂದು ಸಾಗರ ತಾಲ್ಲೂಕುಗಳಲ್ಲಿ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಎಷ್ಟೊತ್ತಿಗೆ ಮಳೆಯಾಗಬಹುದು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422