SHIVAMOGGA LIVE NEWS, 7 DECEMBER 2024
ನವದೆಹಲಿ : ರಾಜ್ಯದಲ್ಲಿ ಮೂರು ಹೊಸ ಕೇಂದ್ರಿಯ ವಿಶ್ವವಿದ್ಯಾಲಯ ಸ್ಥಾಪನೆ, ಶಿವಮೊಗ್ಗ ಕೇಂದ್ರೀಯ ವಿದ್ಯಾಲಯವನ್ನು (Kendriya Vidyalaya) ಮೇಲ್ದರ್ಜೆಗೇರಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್, ಕರ್ನಾಟಕದಲ್ಲಿ ಮೂರು ಸೇರಿದಂತೆ ದೇಶದಾದ್ಯಂತ 85 ಕೇಂದ್ರೀಯ ವಿದ್ಯಾಲಯಗಳು ಮತ್ತು ರಾಜ್ಯದಲ್ಲಿ ಒಂದು ಸೇರಿದಂತೆ 28 ನವೋದಯ ವಿದ್ಯಾಲಯಗಳನ್ನು ತೆರೆಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು.
ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ಮೇಲ್ದರ್ಜೆಗೇರಿಸಲು ಒಪ್ಪಿಗೆ ನೀಡಲಾಗಿದೆ. ಎಲ್ಲ ವಿಭಾಗಗಳಲ್ಲಿ ಎರಡು ಹೆಚ್ಚುವರಿ ತರಗತಿಗಳನ್ನು ತೆರೆಯಲಾಗುತ್ತದೆ.
– ಅಶ್ವಿನಿ ವೈಷ್ಣವ್, ಕೇಂದ್ರ ವಾರ್ತಾ ಸಚಿವ
ಯಾದಗಿರಿ ಜಿಲ್ಲೆಯ ಮುದ್ನಾಳ್, ಚಿತ್ರದುರ್ಗ ಜಿಲ್ಲೆಯ ಕುಂಚಿಗಾನಲ್ ಗ್ರಾಮ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಈಳರ್ಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ಆರಂಭವಾಗಲಿವೆ. ಬಳ್ಳಾರಿ ಜಿಲ್ಲೆಯಲ್ಲಿ ನವೋದಯ ವಿದ್ಯಾಲಯ ತೆರೆಯಲಾಗುತ್ತದೆ ಎಂದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಗೆ ಹೊಸ ಪೊಲೀಸ್ ಠಾಣೆ, ಯಾವುದು? ಎಷ್ಟು ಸಿಬ್ಬಂದಿ ಇರ್ತಾರೆ?