ಕೋಣಂದೂರು : ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ (Suffocation) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕಾರ್ಕೊಡ್ಲುವಿನಲ್ಲಿ ಘಟನೆ ಸಂಭವಿಸಿದೆ. ಕೇರಳದ ಸತೀಶ್ (45) ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಕಾರ್ಕೊಡ್ಲುವಿನಲ್ಲಿ ರಾಘು ಎಂಬುವರು ಈಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಆ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆ ಇಳಿದಿದ್ದರು. ಈ ಸಂದರ್ಭ ಉಸಿರುಗಟ್ಟಿ (Suffocation) ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ಬಾವಿಯಿಂದ ಮೇಲಕ್ಕೆ ತೆಗೆದರು. ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸತೀಶ್ ಅವರ ಮೃತದೇಹವನ್ನು ಕೇರಳಕ್ಕೆ ಕಳುಹಿಸಿಕೊಡಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ವಲಯ ಕಚೇರಿಗೆ ವಾರ್ಡ್ಗಳ ವಿಂಗಡಣೆ ಅವೈಜ್ಞಾನಿಕ, ಜೆಡಿಎಸ್ ಆಕ್ರೋಶ, ಮನವಿಯಲ್ಲಿ ಏನೇನಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200