ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ KSIIDC ಅಧ್ಯಕ್ಷರ ಭೇಟಿ, ಎರಡು ಮಹತ್ವದ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ (Shimoga Airport) ಅಭಿವೃದ್ಧಿ ಕಾಮಗಾರಿಗಳನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ (KSIIDC) ಅಧ್ಯಕ್ಷ ಎಸ್.ಜಿ.ನಂಜಯ್ಯನ ಮಠ ಇಂದು ಪರಿಶೀಲಿಸಿದರು.

ಜೂನ್ ಮೊದಲ ವಾರದಲ್ಲಿ ಕಾಮಗಾರಿ ಪೂರ್ಣ

ವಿಮಾನ ನಿಲ್ದಾಣದ ಕಾಮಗಾರಿಗಳ ಬಗ್ಗೆ ಮಾತನಾಡಿದ ಎಸ್.ಜಿ.ನಂಜಯ್ಯನ ಮಠ, “ಡಿವಿಓಆರ್‌ ಕಾಮಗಾರಿಯು ಜೂನ್ ಮೊದಲನೇ ಅಥವಾ ಎರಡನೇ ವಾರದಲ್ಲಿ ಪೂರ್ಣಗೊಳ್ಳಲಿದೆ. ಜೂನ್ ಮೊದಲ ವಾರದಲ್ಲಿ ನಾನು ಮತ್ತೊಮ್ಮೆ ಭೇಟಿ ನೀಡುತ್ತೇನೆ. ಅಷ್ಟರಲ್ಲಿ ಶೇ.99 ರಷ್ಟು ಕೆಲಸ ಪೂರ್ಣಗೊಂಡಿರಬೇಕು” ಎಂದು ಸೂಚನೆ ನೀಡಿದರು.

KSIIDC-President-visit-Shimoga-Airport

KSIIDC-President-visit-Shimoga-Airport

ನೈಟ್ ಲ್ಯಾಂಡಿಂಗ್

“ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜೂನ್ ಎರಡನೇ ವಾರದಲ್ಲಿ ರಾತ್ರಿ ವೇಳೆ ವಿಮಾನ ಇಳಿಯುವ ಸೌಲಭ್ಯಕ್ಕೆ ಚಾಲನೆ ಪಡೆಯಲಿವೆ” ಎಂದರು. ಇನ್ನು ಬೆಂಗಳೂರು-ಶಿವಮೊಗ್ಗ ನಡುವಿನ ವಿಮಾನಯಾನ ಸ್ಥಗಿತಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಇಂಡಿಗೋ ಸಂಸ್ಥೆಯು ಮೇ 1 ರಿಂದ ವಿಮಾನ ಸೇವೆ ತಾತ್ಕಾಲಿಕವಾಗಿ ನಿಲ್ಲಿಸಿದೆ. ಈ ಹಿನ್ನೆಲೆ ಪರ್ಯಾಯ ವ್ಯವಸ್ಥೆಗಾಗಿ ಇತರ ವಿಮಾನಯಾನ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಶೀಘ್ರ ವಿಮಾನಯಾನ ಸೇವೆ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ನಂಜಯ್ಯನ ಮಠ ತಿಳಿಸಿದರು.

ಇದನ್ನೂ ಓದಿ : ಶಿವಮೊಗ್ಗ – ಬೆಂಗಳೂರು ವಿಮಾನ ಸೇವೆ ಸ್ಥಗಿತ, ಯಾಕೆ? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ಈ ಸಂದರ್ಭ ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ದೇಶಕ ಶಮಂತ್‌, ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ವಿದ್ಯಾಧರ ಸಾಲಿಮಠ ಸೇರಿದಂತೆ ಹಲವರು ಇದ್ದರು. 

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment