
ಶಿವಮೊಗ್ಗ ಲೈವ್.ಕಾಂ | SHIMOGA | 29 ಏಪ್ರಿಲ್ 2020
ಹೊರ ಜಿಲ್ಲೆ, ಹೊರ ರಾಜ್ಯದಿಂದ ಶಿವಮೊಗ್ಗಕ್ಕೆ ಬಂದು ಲಾಕ್ಡೌನ್ ಸಂದರ್ಭ ಸಿಕ್ಕಬಿದ್ದಿರುವ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 400 ಜನರನ್ನು ಗುರುತಿಸಲಾಗಿದೆ.
ಕಾರ್ಮಿಕರನ್ನು ಕಳುಹಿಸಲು KSRTC ಬಸ್ ವ್ಯವಸ್ಥೆ ಮಾಡಲಾಗಿದೆ. ಇನ್ನೊಂದು ದಿನದಲ್ಲಿ ಅವರನ್ನೆಲ್ಲ ಇಲ್ಲಿಂದ ಕಳುಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಬಸ್ಸಿನಲ್ಲೂ ಸಾಮಾಜಿಕ ಅಂತರಕಾರ್ಮಿಕರನ್ನು ತಮ್ಮೂರಿಗೆ ಕಳುಹಿಸುವಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ. ಹಾಗಾಗಿ ಪ್ರತಿ ಸೀಟಿನಲ್ಲಿ ಒಬ್ಬರಿಗೆ ಮಾತ್ರ ಕೂರಲು ಅವಕಾಶ ಕಲ್ಪಿಸಲಾಗಿದೆ. ಇದೆ ಮಾದರಿಯಲ್ಲಿ ಬಸ್ಸಿನಲ್ಲಿ ಜನರನ್ನು ಕೂರಿಸಿ ಕಳುಹಿಸಲಾಗುತ್ತಿದೆ.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]