ಶಿವಮೊಗ್ಗ ಲೈವ್
ಶಿವಮೊಗ್ಗ: ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆಯೊಂದು (Leopard) ದಾಳಿ ನಡೆಸಿದೆ. ಶಿವಮೊಗ್ಗ ತಾಲೂಕು ಉಂಬ್ಳಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈದೊಟ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಬಿಷ್ಟೇಗೌಡ ಎಂಬುವವರ ಮನೆ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದೆ. ಹಸು ಮೃತಪಟ್ಟಿದೆ. ಕಳೆದ ವಾರ ಸಂಪತ್ ಎಂಬುವವರಿಗೆ ಸೇರಿದ ಹಸುವಿನ ಮೇಲು ಚಿರತೆ ದಾಳಿ ಮಾಡಿ ಕೊಂದಿತ್ತು.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚಿರತೆ ಸೆರೆಗೆ ಬೋನ್ ಇರಿಸಿದ್ದಾರೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗ ಸಿಟಿ, ವಿವಿಧ ಗ್ರಾಮಗಳಲ್ಲಿ ಸೆ.22ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

#news, #Shivamogga, #leopard attack, #human animal conflict, #wildlife, #livestock, #forest department, #cow, #local news, #Karnataka.
