ಶಿವಮೊಗ್ಗ ಜಿಲ್ಲೆಯಿಂದ ಮಳೆ ಮಾಯ, ಮತ್ತೆ ಶುರುವಾಯ್ತು ಬಿಸಿಲ ಝಳ, 24 ಗಂಟೆಯಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 1 AUGUST 2023

SHIMOGA : ಜಿಲ್ಲೆಯಾದ್ಯಂತ ಮಳೆ ಕಾಣೆಯಾಗಿದ್ದು (Less Rainfall) ಬಿಸಿಲು ಆವರಿಸಿದೆ. ಸದ್ಯ ಶಿವಮೊಗ್ಗದಲ್ಲಿ ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ.

ಜೋರು ಮಳೆಯಾಗಬೇಕಿದ್ದ ಸಂದರ್ಭ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಆವರಿಸಿದೆ. ಮಳೆ ಸಂಪೂರ್ಣ ಕ್ಷೀಣಿಸಿದ್ದು (Less Rainfall) ಅಲ್ಲಲ್ಲಿ ಚದುರಿದಂತೆ ಸುರಿಯುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸರಾಸರಿ 8.97 ಮಿ.ಮೀ ಮಳೆಯಾಗಿದೆ. ಭದ್ರಾವತಿ ತಾಲೂಕಿನಲ್ಲಿ ಒಂದು ಮಿ.ಮೀ.ಗಿಂತಲೂ ಕಡಿಮೆಯಾಗಿದೆ.

Low-Rainfall-in-Shimoga-city-woman-holding-umbrella-to-avoid-sunshine

PHOTO : ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮಹಿಳೆಯೊಬ್ಬರು ಛತ್ರಿ ಹಿಡಿದು ನಡೆದು ಸಾಗುತ್ತಿರುವುದು.

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 5.20 ಮಿ.ಮೀ, ಭದ್ರಾವತಿ 0.90 ಮಿ.ಮೀ, ತೀರ್ಥಹಳ್ಳಿ 15.90 ಮಿ.ಮೀ, ಸಾಗರ 16.20 ಮಿ.ಮೀ, ಶಿಕಾರಿಪುರ 2.90 ಮಿ.ಮೀ, ಸೊರಬ 5.20 ಮಿ.ಮೀ, ಹೊಸನಗರ 16.50 ಮಿ.ಮೀ ಮಳೆಯಾಗಿದೆ.

ಹೆಚ್ಚಾಯ್ತು ತಾಪಮಾನ

ಜಿಲ್ಲೆಯ ಅಲ್ಲಲ್ಲಿ ಚದುರಿದ ಹಾಗೆ ಮಳೆ ಸುರಿಯುತ್ತಿದೆ. ಕೆಲವು ಕ್ಷಣ ಮಳೆ ಜೋರಾಗಿ ಬಂದು ಮರೆಯಾಗುತ್ತಿದೆ. ಬಿಸಿಲ ಝಳ ಜೋರಾಗಿದ್ದು, ತಾಪಮಾನ ಏರಿಕೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕನಿಷ್ಠ 26 ಡಿಗ್ರಿಯಿಂದ ಗರಿಷ್ಠ 28 ಡಿಗ್ರಿವೆರೆಗೆ ತಾಪಮಾನ ಇದೆ. ಮಳೆಗಾಲದಲ್ಲಿ ಮಳೆಯಿಂದ ರಕ್ಷಣೆಗೆ ಛತ್ರಿ ಬಳಸುವ ಬದಲು ಜನ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಲು ಬಳಕೆ ಮಾಡುತ್ತಿದ್ದಾರೆ.

ಜಲಾಯಶಯಗಳ ಒಳ ಹರಿವು ಕುಸಿತ

ಮಳೆ ಕಡಿಮೆ ಆಗಿರುವುದರಿಂದ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕುಸಿತ ಕಂಡಿದೆ. ಲಿಂಗನಮಕ್ಕಿ ಜಲಾಶಯಕ್ಕೆ 13,660 ಕ್ಯೂಸೆಕ್‌ ಮಾತ್ರ ಒಳ ಹರಿವು ಇದೆ. ನೀರಿನ ಮಟ್ಟ 1787.9 ಅಡಿಗೆ ತಲುಪಿದೆ. ಭದ್ರಾ ಜಲಾಶಯಕ್ಕೆ 5756 ಕ್ಯೂಸೆಕ್‌ ಒಳ ಹರಿವು ಇದ್ದು, ನೀರಿನ ಮಟ್ಟ 162.8 ಅಡಿಗೆ ಏರಿಕೆಯಾಗಿದೆ. ತುಂಗಾ ಜಲಾಶಯ ಭರ್ತಿಯಾಗಿದ್ದು 10,493 ಕ್ಯೂಸೆಕ್‌ ಒಳ ಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment