ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
(FILE PHOTO)
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 APRIL 2021
ಲಾಕ್‍ಡೌನ್ ಮಾದರಿ ಕರ್ಫ್ಯೂ ಜಾರಿಯಲ್ಲಿದ್ದರೂ ಮದ್ಯ ಪ್ರಿಯರಿಗೆ ಯಾವುದೆ ಅಡ್ಡಿಯಿಲ್ಲ. ಅಗತ್ಯ ವಸ್ತು ಖರೀದಿಯಂತೆ ಮದ್ಯ ಖರೀದಿಗೆ ಅವಕಾಶವಿದೆ. ಆದರೆ ಶಿವಮೊಗ್ಗ ಜಿಲ್ಲಾ ಪೊಲೀಸರು ಮದ್ಯದಂಗಡಿ ಮಾಲೀಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸ್ವಲ್ಪ ಯಾಮಾರಿದರೂ ಮದ್ಯದಂಗಡಿ ಮಾಲೀಕರ ವಿರುದ್ಧ ಕೇಸ್ ಬೀಳಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಮದ್ಯದಂಗಡಿ ಮೇಲೆ ಪೊಲೀಸರು ಹೆಚ್ಚು ನಿಗಾ ವಹಿಸಲಿದ್ದಾರೆ. ಯಾವುದೆ ಕಾರಣಕ್ಕೂ ಬಾರ್‍ಗಳಲ್ಲಿ ಮದ್ಯ ಸೇವಿಸುವಂತಿಲ್ಲ ಎಂದು ತಿಳಿಸಿದರು.
ಮದ್ಯದಂಗಡಿಗಳಲ್ಲಿ ಪಾರ್ಸಲ್ ಸರ್ವಿಸ್ ಇದೆ. ಒಂದು ವೇಳೆ ಮದ್ಯದಂಗಡಿ ಅಕ್ಕಪಕ್ಕದಲ್ಲಿ ಕುಳಿತು ಯಾರಾದರೂ ಮದ್ಯ ಸೇವಿಸಿದರೂ ಮದ್ಯದಂಗಡಿ ಮಾಲೀಕರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















