ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020
ಲಾಕ್’ಡೌನ್ ಸಂದರ್ಭ ವೈನ್ ಶಾಪ್ ಒಂದರಿಂದ ಮದ್ಯವನ್ನು ಬೇರೆಡೆ ಕೊಂಡೊಯ್ಯುತ್ತಿದ್ದ ವ್ಯಕ್ತಿ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರು, ಬಾಕ್ಸ್’ಗಟ್ಟಲೆ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸೊರಬ ತಾಲೂಕು ಆನವಟ್ಟಿಯಲ್ಲಿ ಘಟನೆಯ ಸಂಭವಿಸಿದೆ. ಇಲ್ಲಿನ ವೈನ್ ಶಾಪ್ ಒಂದರಿಂದ ವ್ಯಕ್ತಿಯೊಬ್ಬರು 25 ಬಾಕ್ಸ್ ಮದ್ಯವನ್ನು ಕಾರಿನಲ್ಲಿ ಕೊಂಡೊಯ್ಯುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು, ಕಾರು ಮತ್ತು ಮದ್ಯವನ್ನು ಸೀಜ್ ಮಾಡಿದ್ದಾರೆ.
‘ದೇವರಾಜ್ ಎಂಬಾತ ಮದ್ಯವನ್ನು ಕೊಂಡೊಯ್ಯುವಾಗ ದಾಳಿ ನಡೆಸಲಾಗಿದೆ. ರಾತ್ರಿ ದಾಳಿ ವೇಳೆ ಆತ ಪರಾರಿಯಾಗಿದ್ದಾನೆ. ಆತನಿಮದ ವಶಕ್ಕೆ ಪಡೆದ ಮದ್ಯ ಮತ್ತು ಕಾರಿನ ಮೌಲ್ಯ 2.25 ಲಕ್ಷ ರೂ. ಎಂದು ಅಂದಾಜು ಮಾಡಲಾಗಿದೆ. ಇನ್ಸ್’ಪೆಕ್ಟರ್ ಹನುಮಂತಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ’’ ಅಂತಾ ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್ ತಿಳಿಸಿದ್ದಾರೆ.
ಹಗಲು, ರಾತ್ರಿ ಕಾರ್ಯಾಚರಣೆಗೆ ಟೀಮ್
ಕರೋನ ಲಾಕ್’ಡೌನ್ ಹಿನ್ನೆಲೆ ಮದ್ಯ ಮಾರಾಟ ನಿಷೇಧವಿದೆ. ಸರ್ಕಾರದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಸಲುವಾಗಿ ಅಬಕಾರಿ ಇಲಾಖೆ ಇನ್ಸ್’ಪೆಕ್ಟರ್, ಸಬ್’ಇನ್ಸ್’ಪೆಕ್ಟರ್’ಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಹಗಲು, ರಾತ್ರಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಪ ಆಯುಕ್ತ ಅಜಿತ್ ಕುಮಾರ್ ಸ್ಪಷ್ಟಪಡಿಸಿದರು.
ಲಾಕ್’ಡಾನ್ ಆದ ನಂತರದಿಂದ ಈವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 13 ಪ್ರಕರಣಗಳು ದಾಖಲು ಮಾಡಿಕೊಳ್ಳಲಾಗಿದೆ. ಸುಮಾರು 500 ಲೀಟರ್’ನಷ್ಟು ಮದ್ಯ ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ ಮೂರುವರೆ ಲಕ್ಷ ರೂ. ಎಂದು ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]