ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 11 AUGUST 2024 : ಸಾಲ (Loan) ಪಡೆದು ಹಿಂತಿರುಗಿಸದೆ, ಬೆದರಿಕೆ ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸಮನೆ ಕುವೆಂಪು ರಸ್ತೆಯ ಪತ್ರಕರ್ತ ಎ.ಭರತೇಶ (42) ಮತ್ತು ಗಾಡಿಕೊಪ್ಪ ಗೋಲ್ಡನ್‌ಸಿಟಿ ನಿವಾಸಿ ಹೆಚ್.ಎಂ.ಸತೀಶ್ ಬಂಧಿತರು. ಕೀರ್ತಿನಗರ ಡಿ.ಹೆಚ್.ಕಾಲೇಜು ಪಕ್ಕ 1ನೇ ತಿರುವು ನಿವಾಸಿ ಸಿ.ಪಿ.ನಂಜುಂಡಪ್ಪ (63) ಅವರು ತಮ್ಮ ಮನೆಯಲ್ಲಿ ಗುರುವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
ಅವರ ಜೇಬಿನಲ್ಲಿ ಡೆತ್‌ನೋಟ್ ಪತ್ತೆಯಾಗಿತ್ತು. ಅದರಲ್ಲಿ ಭರತೇಶ, ಸತೀಶ್ ಮತ್ತು ಸಂತೋಷ್ ತನ್ನಿಂದ ಸಾಲ ಪಡೆದು ಹಿಂತಿರುಗಿಸದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬರೆದಿದ್ದರು. ವಿನೋಬನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಹೈಕೋರ್ಟ್ ನ್ಯಾಯಾಧೀಶರಿಗೆ ಪೂರ್ಣ ಕುಂಭ ಸ್ವಾಗತ, ಸಮ್ಮೇಳನದಲ್ಲಿ ಪ್ರಮುಖ ವಿಚಾರ ಚರ್ಚೆ
LATEST NEWS
- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















