BREAKING NEWS | ಶಿವಮೊಗ್ಗದಲ್ಲಿ ಲಾಕ್‌ಡೌನ್ ಮುಂದುವರಿಕೆ, ಅಗತ್ಯ ವಸ್ತು ಖರೀದಿಗೆ ಸ್ವಲ್ಪ ರಿಲ್ಯಾಕ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು,  ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಿಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಾಕ್‍ಡೌನ್ ಮುಂದುವರಿಕೆ ಕುರಿತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Shivamogga Live Promotion

ಪಾಸಿಟಿವಿಟಿ ಪ್ರಮಾಣ ತಗ್ಗುತ್ತಿದೆ

ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ಪ್ರಮಾಣ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್‍ಡೌನ್ ಇದೇ ರೀತಿ ಮುಂದುವರೆಸಲು ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಲಾಕ್‍ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.

ಕೈಗಾರಿಕೆ, ಅಡಿಕೆ ಮಂಡಿ

ಇನ್ನುಳಿದಂತೆ ಕೈಗಾರಿಕಾ ಚಟುವಟಿಕೆಗಳಿಗೆ ಈಗಿರುವಂತೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಸಗಟು ದಿನಸಿ ವ್ಯಾಪಾರಕ್ಕೆ ಬುಧವಾರ ಮತ್ತು ಶನಿವಾರ ಬೆಳಿಗ್ಗೆ 6 ರಿಂದ 9ರವರೆಗೆ ಅವಕಾಶವಿದೆ. ಅಡಿಕೆ ಮಂಡಿಯಲ್ಲಿ ಸಗಟು ವ್ಯಾಪಾರಕ್ಕೆ ಹಾಗೂ ಟೆಂಡರ್‌ನಲ್ಲಿ ಭಾಗವಹಿಸುವವರಿಗೆ ಪಾಸು ನೀಡಲಾಗುವುದು. ಎಪಿಎಂಸಿಯಲ್ಲಿ ಬೆಳಿಗ್ಗೆ 6ರಿಂದ 8ರವರೆಗೆ ವ್ಯವಹಾರಕ್ಕೆ ಅವಕಾಶವಿದೆ ಎಂದು ಹೇಳಿದರು.

ಶಾಸಕರಾದ ಅರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅರುಣ್, ದತ್ತಾತ್ರೇಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸನ್ನ, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment