ಶಿವಮೊಗ್ಗ ಲೈವ್.ಕಾಂ | SHIMOGA NEWS | 10 JUNE 2021
ಕರೋನ ನಿಯಂತ್ರಣಕ್ಕಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರೆಯಲಿದೆ. ಜಿಲ್ಲಾಧಿಕಾರಿ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಾಕ್ ಡೌನ್ ಮುಂದುವರೆಸುವುದಾಗಿ ತಿಳಿಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಸೇರಿದಂತೆ ಎಂಟು ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಕರೋನ ಕಂಟ್ರೋಲ್‍ಗೆ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರೋನ ನಿಯಂತ್ರಣಕ್ಕೆ ಜಿಲ್ಲಾಡಳಿತಗಳು ಕಟ್ಟುನಿಟ್ಟು ಕ್ರಮ ಕೈಗೊಳ್ಳಬೇಕು. ಇನ್ನೊಂದು ವಾರದ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ಸಂಜೆ ವೇಳೆಗೆ ಮತ್ತೊಂದು ಸಭೆ ನಡೆಸಿ ಲಾಕ್ ಡೌನ್ ರೂಪುರೇಷೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]