ಶಿವಮೊಗ್ಗ ಲೈವ್.ಕಾಂ | SHIMOGA | 11 ಫೆಬ್ರವರಿ 2020
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಫೆ.8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಸಿದ ಲೋಕ ಅದಾಲತ್ನಲ್ಲಿ 811 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.
ವಿವಿಧ ರೀತಿಯ 7,797 ಪ್ರಕರಣಗಳನ್ನು ತೆಗೆದುಕೊಂಡು, ಅವುಗಳ ಪೈಕಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ 656 ಪ್ರಕರಣಗಳನ್ನು ಹಾಗೂ 155 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು ಎಂದು ಜಿಲ್ಲಾ ಸಿವಿಲ್ ನ್ಯಾಯಾಧೀಶರಾದ ಕೆ.ಎನ್.ಸರಸ್ವತಿ ತಿಳಿಸಿದ್ದಾರೆ.
ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗ ನಗರದಲ್ಲಿ 16ಪೀಠಗಳನ್ನು, ಭದ್ರಾವತಿಯಲ್ಲಿ 7, ಹೊಸನಗರದಲ್ಲಿ2, ಸಾಗರದಲ್ಲಿ 4 ಪೀಠಗಳನ್ನು ರಚಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ರಾಜಿ ಸಂಧಾನ ಮಾಡಿಸಲಾಯಿತು ಅವರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]