ಶಿವಮೊಗ್ಗದ ಪ್ರತಿ ತಾಲೂಕಿನಲ್ಲಿ ಲೋಕಾಯುಕ್ತರಿಂದ ಸಭೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIMOGA NEWS, 18 OCTOBER 2024 : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅಕ್ಟೋಬರ್-2024ರ ತಿಂಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ (Meeting) ನಡೆಸಲಿದಾರೆ. ಪ್ರತಿ ತಾಲೂಕಿನಲ್ಲಿ ನಿಗದಿಪಡಿಸಿದ ದಿನಾಂಕದಂದು ಸಭೆ ನಡೆಸಿದ್ದಾರೆ.

ಎಲ್ಲೆಲ್ಲಿ ಯಾವಾಗ ಸಭೆ?

ಅಕ್ಟೋಬರ್‌ 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ

ಇದನ್ನೂ ಓದಿ » ಲಾಡ್ಜ್‌ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್‌ ಮೃತದೇಹ ಪತ್ತೆ

ಅ.22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ

Karanataka-Lokayukta.webp

ಅ.23 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ನಗರಸಭೆ ಸಭಾಂಗಣ

ಇದನ್ನೂ ಓದಿ » ಬಸ್ಸಿನೊಳಗೆ ನುಗ್ಗಿ ಚಾಲಕನಿಗೆ ಥಳಿಸಿದ ಮತ್ತೊಂದು ಬಸ್ಸಿನ ಸಿಬ್ಬಂದಿ

ಅ.24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.

ಜನ ಏನೆಲ್ಲ ಅರ್ಜಿ ಸಲ್ಲಿಸಬಹುದು?

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Pace-College-Prajna.

Leave a Comment