SHIMOGA NEWS, 19 SEPTEMBER 2024 : ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ (Meeting) ನಡೆಸಲಿದ್ದಾರೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಎಲ್ಲೆಲ್ಲಿ ಯಾವಾಗ ಸಭೆ?
» ಸೆ. 21 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ.
![]() |
» ಸೆ.24 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ.
» ಸೆ.25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ.
» ಸೆ.26 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ.
» ಸೆ.27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಏನೆಲ್ಲ ದೂರು ಕೊಡಬಹುದು?
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಡುವ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಜೀವದ ಹಂಗು ತೊರೆದು ಕೆರೆಗೆ ಹಾರಿ ಗುತ್ತಿಗೆದಾರನನ್ನು ರಕ್ಷಿಸಿದ ಪೊಲೀಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200