NEWS HIGHLIGHTS
ಶಿವಮೊಗ್ಗ: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ನಗರದ ಆಲ್ಕೊಳ ವೃತ್ತದ ಬಳಿ ಇರುವ ಸಾಮಾಜಿಕ ಅರಣ್ಯ ವಲಯ ಕಚೇರಿ ಪಕ್ಕದ ಸಂಶೋಧನಾ ವಿಭಾಗದ ಎಸಿಎಫ್ ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಬೆಳಿಗ್ಗೆಯಿಂದಲೇ ಕಚೇರಿಯಲ್ಲಿ ಅಧಿಕಾರಿಗಳು ಪ್ರಮುಖ ಕಡತಗಳು ಹಾಗೂ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಲೋಕಾಯುಕ್ತ ಎಸ್‌ಪಿ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ರುದ್ರೇಶ್ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ. ಕಚೇರಿಯಲ್ಲಿ ದಾಖಲಾತಿ ಪರಿಶೀಲನೆ ಮುಂದುವರಿದಿದೆ.