ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
10/10/2025
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅ.11ರಂದು ಜಿಲ್ಲಾ ಪ್ರವಾಸ (Shimoga Tour) ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅ.11ರಂದು ಬೆಳಗ್ಗೆ 9.30ಕ್ಕೆ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಕ್ಕೆ ತಾಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ. ಮಧ್ಯಾಹ್ನ 12ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
ಅ.12ರಂದು ಬೆಳಗ್ಗೆ 10ಕ್ಕೆ ಆನವಟ್ಟಿಯ ಮೆಸ್ಕಾಂ ಕಚೇರಿ ಆವರಣದಲ್ಲಿ ಮೆಸ್ಕಾಂ ವಸತಿ ಗೃಹ ಉದ್ಘಾಟನೆ, ಬೆಳಗ್ಗೆ 10.30ಕ್ಕೆ ಆನವಟ್ಟಿಯ ಕೆಪಿಎಸ್ ಶಾಲೆ ಆವರಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 10 ನೂತನ ಕೊಠಡಿಗಳಿಗೆ ಗುದ್ದಲಿ ಪೂಜೆ, ಮಧ್ಯಾಹ್ನ 12ಕ್ಕೆ ಕುಪ್ಪಗಡ್ಡೆಯಲ್ಲಿ ಮೆಸ್ಕಾಂ ಶಾಖಾ ಕಚೇರಿ ಉದ್ಘಾಟನೆ, ಮಧ್ಯಾಹ್ನ 12.30ಕ್ಕೆ ಕುಪ್ಪಗಡ್ಡೆಯ ಹೆಚ್ಚುವರಿ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ. ಮಧ್ಯಾಹ್ನ 2ಕ್ಕೆ ಸೊರಬ ಖಾಸಗಿ ಬಸ್ ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಕುಡಿಯುವ ನೀರು ಪೂರೈಕೆ ಇರಲ್ಲ, ಯಾವ್ಯಾವ ಬಡಾವಣೆ?
Shimoga Tour


