ಶಿಕಾರಿಪುರ: ತಂದೆಯಂತೆ ಹೋರಾಟ, ಪಾದಯಾತ್ರೆ ಮೂಲಕ ತಾಲೂಕಿನ ನೀರಾವರಿ ಯೋಜನೆಗೆ ಅಡಿಗಲ್ಲು ಹಾಕಿದ ಸಚಿವ ಮಧು ಬಂಗಾರಪ್ಪನವರಿಗೆ ಯಡಿಯೂರಪ್ಪ ಕುಟುಂಬದ ಸರ್ಟಿಫಿಕೇಟ್ (Certificate) ಅಗತ್ಯವಿಲ್ಲ ಎಂದು ಪುರಸಭಾ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಯೂರ್ ದರ್ಶನ್ ಉಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿಕಾರಿಪುರದ ಸುದ್ದಿಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ರಾಘವೇಂದ್ರ ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ. ವಿನಾಕಾರಣ ಸಚಿವ ಮಧು ಬಂಗಾರಪ್ಪ ಅವರ ತೇಜೋವಧೆ ಮಾಡುತ್ತಿದ್ದಾರೆ ಎಂದರು.
ಪಟ್ಟಣದ ಒಳಚರಂಡಿ ಅವ್ಯವಸ್ಥೆ ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ₹30 ಕೋಟಿ ಅನುದಾನ ನೀಡಿದ್ದಾರೆ. ತಾಲೂಕಿಗೆ ಸರ್ಕಾರದ ಕೊಡುಗೆ ಕೇಳುವ ನಿಮಗೆ ನಾಚಿಕೆಯಾಗಬೇಕು. ತಾಲೂಕಿಗೆ ಟೋಲ್ ಗೇಟ್ ಕೊಡುಗೆ ನೀಡಿದ್ದು ಯಡಿಯೂರಪ್ಪ. ಜನತೆಯ ವಿರೋಧಕ್ಕೆ ಬೆಚ್ಚಿಬಿದ್ದು ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿದ್ದಾರೆ.
- ಮಯೂರ್ ದರ್ಶನ್ ಉಳ್ಳಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ
![]()
ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್, ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್, ಕಸಬಾ ಬ್ಯಾಂಕ್ ನಿರ್ದೇಶಕ ಬಡಗಿ ಪಾಲಾಕ್ಷಪ್ಪ, ಈಶಣ್ಣ ಕಲವತ್ತಿ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಕ್ಬರ್ ಕಾಲಿಗೆ ಗುಂಡೇಟು, ಜಿಲ್ಲಾ ರಕ್ಷಣಾಧಿಕಾರಿ ಫಸ್ಟ್ ರಿಯಾಕ್ಷನ್, ಏನಂದ್ರು ಎಸ್‌ಪಿ?
Certificate
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





