BENGALURU NEWS, 30 OCTOBER 2024 : ಶರಾವತಿ ಯೋಜನೆ ಮುಳುಗಡೆ ಸಂತ್ರಸ್ತರು, ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಮತ್ತು ಸಮಸ್ಯೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಸಂತ್ರಸ್ಥರು ಹಾಗೂ ರೈತರ ಸಭೆ (Meeting) ನಡೆಯಿತು. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು.
ಯಾರೆಲ್ಲ ಏನೆಲ್ಲ ಮಾತನಾಡಿದರು?
ರೈತ ಮುಖಂಡರು ಆಗ್ರಹಿಸಿದ್ದೇನು?
ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು, ಮೂರು ಎಕರೆಗಿಂತ ಕೆಳಗಿನ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಾಗರ ತಾಲೂಕಿನ ಬಾರಂಗಿ ಹೋಬಳಿಯ ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಮುಳುಗಡೆ ಆಗದ ಕೆಪಿಸಿ ಭೂಮಿಯನ್ನು ಸಕ್ರಮೀಕರಣಗೊಳಿಸುವ ಕುರಿತು ಪುನರ್ ಸರ್ವೆ ಮಾಡಬೇಕು. ಈ ಕುರಿತು ನ್ಯಾಯಾಲಯದಲ್ಲಿ ವಾದಿಸಲು ಸರ್ಕಾರ ಕಠಿಣಾತ್ಮಕ ಹೆಜ್ಜೆ ಇಡಬೇಕು ಎಂದು ಆಗ್ರಹಿಸಿದರು.
ಮಿನಿಸ್ಟರ್ ಹೇಳಿದ್ದೇನು?
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕೆ ಹಿರಿಯ ಐ.ಎ.ಎಸ್. ಅಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಆಗಬೇಕು. ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ. ಇದನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಕ್ರಮವಹಿಸಬೇಕು ಎಂದರು.
ಮುಖ್ಯ ಕಾರ್ಯದರ್ಶಿ ಏನಂದರು?
ರೈತರ ಮನವಿ ಆಲಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಶರಾವತಿ ಮುಳುಗಡೆ ಸಂತ್ರಸ್ಥರ ಪರವಾಗಿ ರಾಜ್ಯ ಸರ್ಕಾರವಿದೆ.ಟಾಸ್ಕ್ ಪೋರ್ಸ್ ರಚನೆ ಮತ್ತು ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ಸಮಸ್ಯೆ ಕುರಿತು ಶಾಸನಾತ್ಮಕ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಅರಣ್ಯ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ಸಭೆ ಕರೆದು ಚರ್ಚಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ರೈತ ಮುಖಂಡರಾದ ತೀ.ನಾ ಶ್ರೀನಿವಾಸ್, ಬಿ.ಆರ್ ಜಯಂತ್,ವಿ.ಜಿ ಶ್ರೀಕರ್,ದಿನೇಶ್ ಶಿರಿವಾಳ,ದೂಗುರು ಪರಮೇಶ್ವರ್,ಬಿ.ಎ ರಮೇಶ್ ಹೆಗಡೆ,ವಕೀಲರಾದ ಧರ್ಮರಾಜ್ ಸೇರಿದಂತೆ ಹಲವರಿದ್ದರು.
ಇದನ್ನೂ ಓದಿ » ಸಾಗರದ ಸಿರಿವಂತೆ ಚಂದ್ರಶೇಖರ್‌ಗೆ ರಾಜ್ಯೋತ್ಸವ ಪ್ರಶಸ್ತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200