ಶಿವಮೊಗ್ಗ: ಬ್ಯಾಂಕ್ ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಅಪರಿಚಿತರು ಕಳುಹಿಸಿದ ಲಿಂಕ್ ಹಾಗೂ ಎಪಿಕೆ ಫೈಲ್ ಡೌನ್ಲೋಡ್ (fake SBI KYC) ಮಾಡಿದ ವ್ಯಕ್ತಿಯೊಬ್ಬರು ತಮ್ಮ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಕಳೆದುಕೊಂಡಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) ಎಸ್ಬಿಐ ಖಾತೆ ಅಪ್ಡೇಟ್ ಮಾಡುವಂತೆ ಮೊಬೈಲ್ಗೆ ಮೆಸೇಜ್ ಬಂದಿತ್ತು. ಅದನ್ನು ನಂಬಿದ ಅವರು ಫೈಲ್ ಡೌನ್ಲೋಡ್ ಮಾಡಿ ಮಾಹಿತಿ ಭರ್ತಿ ಮಾಡಿದ್ದರು. ಕೆಲವೇ ಹೊತ್ತಿಗೆ ಹಂತ ಹಂತವಾಗಿ ಅವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?
ಸಂತ್ರಸ್ತರು ತಮ್ಮ ಎಸ್ಬಿಐ ಉಳಿತಾಯ ಖಾತೆಯಿಂದ ಮೊದಲು ₹50,000, ನಂತರ ಎರಡು ಬಾರಿ ತಲಾ 2 ಲಕ್ಷ ಹಾಗೂ ಮತ್ತೊಮ್ಮೆ 1 ಲಕ್ಷ ಸೇರಿದಂತೆ ಒಟ್ಟು ₹6,50,000 ಕಡಿತವಾಗಿದೆ. ಮೊಬೈಲ್ ಮೆಸೇಜ್ ಬಂದಾಗ ವಂಚನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಸಿಇಎನ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





