ಶಿವಮೊಗ್ಗ: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿ ಕೊನೆಗೆ ಬೇರೊಬ್ಬಳ ಜೊತೆಗೆ ವಿವಾಹಕ್ಕೆ (Marriage) ಸಿದ್ಧವಾಗಿದ್ದ ಯುವಕನ ವಿರುದ್ಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ತಾಲೂಕು ಒಂದರ ಯುವತಿಗೆ (ಹೆಸರು ಗೌಪ್ಯ) ಆಕೆಯ ದೂರದ ಸಂಬಂಧಿಯೊಬ್ಬನ ಪರಿಚಯವಾಗಿ, ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಶಿವಮೊಗ್ಗದಲ್ಲಿಯೇ ಕೆಲಸ ಮಾಡುವಂತೆ ಮನವೊಲಿಸಿದ್ದ ಯುವಕ ಇಲ್ಲಿಗೆ ಕರೆಯಿಸಿಕೊಂಡಿದ್ದ ಎಂದು ಆರೋಪಿಸಲಾಗಿದೆ. ಬೆಂಗಳೂರಿನಿಂದ ಬಂದ ರಾತ್ರಿ ಎನ್.ಟಿ.ರಸ್ತೆಯ ಲಾಡ್ಜ್ ಒಂದರಲ್ಲಿ ರೂಂ ಮಾಡಿಕೊಟ್ಟಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
ಲಾಡ್ಜ್‌ನಲ್ಲಿ ಯುವತಿಯ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಯುವತಿ ಶಿವಮೊಗ್ಗದಲ್ಲಿಯೇ ಕೆಲಸ ಆರಂಭಿಸಿದ್ದು, ಸ್ನೇಹಿತೆಯೊಂದಿಗೆ ರೂಮ್ ಮಾಡಿಕೊಂಡಿದ್ದಳು. ಸ್ನೇಹಿತೆ ಇಲ್ಲದ ಸಂದರ್ಭ ಯುವತಿಯ ರೂಂಗೆ ತೆರಳುತ್ತಿದ್ದ ಯುವಕ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಆರೋಪಿಸಲಾಗಿದೆ. ಕೊನೆಗೆ ಬೇರೊಬ್ಬ ಯುವತಿ ಜೊತೆಗೆ ಮದುವೆ ಸಿದ್ಧವಾಗಿದ್ದ. ಈ ಹಿನ್ನೆಲೆ ಯುವತಿ ನೀಡಿದ ದೂರಿನ ಹಿನ್ನೆಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 69ರ ಅಡಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200