ಶಿವಮೊಗ್ಗದ ಲೈವ್.ಕಾಂ | BELAGAVI NEWS | 22 ಡಿಸೆಂಬರ್ 2021
ಬೆಳಗಾವಿ ಅಧಿವೇಶನದ ಸಂದರ್ಭ ಕೊಡಚಾದ್ರಿ ಬೆಟ್ಟದ ರಸ್ತೆ ಅಭಿವೃದ್ಧಿ ಕುರಿತು ಮಹತ್ವದ ಸಭೆ ನಡೆಯಿತು. ಗೃಹ ಸಚಿವ ಆರಗ ಜ್ಞಾನೇಂದ್ರ, ಅರಣ್ಯ ಸಚಿವ ಉಮೇಶ್ ಕತ್ತಿ, ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೊಡಚಾದ್ರಿ ಬೆಟ್ಟ ರಸ್ತೆ ಕಾಮಗಾರಿ ಪ್ರಾರಂಭಿಸಲು ಇರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಿಸಬೇಕು. ರಸ್ತೆ ನಿರ್ಮಿಸುವ ಯೋಜನೆ ಕಾರ್ಯಕ್ಕೆ ಮುಂದಾಗಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ನಿರ್ದೇಶಿಸಲಾಯಿತು.
ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜಯ ಬಿಜೂರ್ ಒಳಗೊಂಡಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.