ಭದ್ರಾವತಿ : ಮೈಸೂರು ಪೇಪರ್ ಮಿಲ್ಸ್ (MPM) ಕಾರ್ಖಾನೆ ಪುನಾರಂಭ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ತಿಳಿಸಿದ್ದಾರೆ.
ಬೆಂಗಳೂರಿನ ವಿಕಾಸ ಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ MPM ಪುನಾರಂಭ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಶಾಸಕ ಸಂಗಮೇಶ್ವರ ತಿಳಿಸಿದ್ದಾರೆ.
ಸದನದಲ್ಲಿ ಚರ್ಚೆ ಬಳಿಕ ಮೀಟಿಂಗ್
ಎಂ.ಪಿ.ಎಂ ಕಾರ್ಖಾನೆ ಪುನಾರಂಭ ಕುರಿತು ಸದನಲ್ಲಿ ಚರ್ಚೆ ನಡೆಸಲಾಯಿತು. ಇದರ ಪರಿಣಾಮ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕಚೇರಿಯಲ್ಲಿ ಶಾಸಕ ಸಂಗಮೇಶ್ವರ, ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಈ ವೇಳೆ ಎಂ.ಪಿ.ಎಂ ಕಾರ್ಖಾನೆಗೆ ಇರುವ ತೊಡಕುಗಳ ಕುರಿತು ಪರಾಮರ್ಶಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭದ್ರಾವತಿಯ ಯುವಕರಿಗೆ ಉದ್ಯೋಗ ಸೃಷ್ಟಿಸುವ ಕಾರ್ಯ ಸಾಕಾರಗೊಳ್ಳುವ ನಿಟ್ಟಿನಲ್ಲಿ ಹಾಗೂ ಮೈಸೂರು ಪೇಪರ್ ಮಿಲ್ಸ್ (ಎಂ.ಪಿ.ಎಂ) ಕಾರ್ಖಾನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಚಿವರ ಸಮ್ಮುಖದಲ್ಲಿ ಸಭೆಗೆ ಒಪ್ಪಿಸಿದ್ದೇನೆ.
– ಬಿ.ಕೆ.ಸಂಗಮೇಶ್ವರ, ಭದ್ರಾವತಿ ಶಾಸಕ
ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೇನೆಯ ನಿವೃತ್ತ ಮಹಿಳಾ ಅಧಿಕಾರಿ, ಕ್ಯಾನ್ಸರ್ ಗೆಲ್ಲುವ ಸೂತ್ರ ತಿಳಿಸಿದ ಕರ್ನಲ್, ಏನದು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200