ಮಾನಸಿಕ ಆರೋಗ್ಯ ಸಲಹೆಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಹರು?

ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಜಿಲ್ಲೆಯ 7 ಬಿ.ಆರ್.ಸಿ ಕೇಂದ್ರಗಳಿಗೆ ಮಾನಸಿಕ ಆರೋಗ್ಯ ಸಲಹೆಗಾರರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹40,000 ಗೌರವಧನ ಹಾಗೂ ₹10,000 ಪ್ರಯಾಣ ಭತ್ಯೆ ದೊರೆಯಲಿದೆ. ನೇಮಕಾತಿಯು ಆಯ್ಕೆಯಾದ ದಿನಾಂಕದಿಂದ ಫೆಬ್ರವರಿ ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ ಅಥವಾ ಕೌನ್ಸಲಿಂಗ್ ಮನೋವಿಜ್ಞಾನ ವಿಷಯಗಳಲ್ಲಿ ಎಂ.ಎ ಅಥವಾ ಎಂ.ಎಸ್‌ಸಿ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 16ರ ಒಳಗೆ ಸಲ್ಲಿಸಬೇಕು.

SHIMOGA-NEWS-GRAPHICS-BY-SHIVAMOGGA-LIVE

ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗದ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9480695460, 9480695461 ಅಥವಾ egovshimoga@gmail.com ಇ-ಮೇಲ್ ಮೂಲಕ ಮಾಹಿತಿ ಪಡೆಯಬಹುದು ಎಂದು ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ತಿಳಿಸಿದ್ದಾರೆ.