JUST MAHITI, 3 OCTOBER 2024 : ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯ ನಡೆಯುತ್ತಿದೆ. ಆದ್ದರಿಂದ ಅ.4ರಂದು ರಾತ್ರಿ 9 ರಿಂದ ಅ.7ರಂದು ಸಂಜೆ 6 ರವರೆಗೆ ಆನ್ಲೈನ್ (Online) ಸೇವೆಗಳು ವ್ಯತ್ಯಯವಾಗಲಿದೆ.
ವಿದ್ಯುತ್ ಬಿಲ್ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಬದಲಾವಣೆ ಹಾಗೂ ಮೊಬೈಲ್ ಆ್ಯಪ್ ಇತ್ಯಾದಿ ಸೇವೆ ವ್ಯತ್ಯಯ ಆಗಲಿದೆ. ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು ನಗರ ಪ್ರದೇಶಗಳ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ತಂತ್ರಾಂಶ ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನ ಕಾಲವಕಾಶ ಬೇಕಿದೆ. ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಬಹುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
![]() |
ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ದಂಡ, ಸಂಸದ ರಾಘವೇಂದ್ರ ಹೇಳಿದ್ದೇನು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200