ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 DECEMBER 2023
TUMKUR : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಸಚಿವ ಮಧು ಬಂಗಾರಪ್ಪ ಸೇರಿದಂತೆ ಕಾರಿನಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಮತ್ತು ಲಾರಿ ಮಧ್ಯೆ ಅಪಘಾತವಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಸಚಿವ ಮಧು ಬಂಗಾರಪ್ಪ ರಾತ್ರಿ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಅಪಘಾತದ ಬಳಿಕ ಬೇರೊಂದು ಕಾರಿನಲ್ಲಿ ಸಚಿವರು ಬೆಂಗಳೂರಿಗೆ ಪ್ರಯಾಣ ಮುಂದುವರೆಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡೇಟು, ಹೇಗಾಯ್ತು ಘಟನೆ?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















