ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲೆ ಪ್ರವಾಸ (Tour) ಕೈಗೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಸಚಿವ ಮಧು ಬಂಗಾರಪ್ಪ ಪಾಲ್ಗೊಳ್ಳಲಿದ್ದಾರೆ.
ಏ.13ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರ ತಾಲೂಕು ಬೇಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಮರತ್ತೂರಿನಿಂದ ಬೆಳ್ಳೆಣ್ಣೆವರೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಾಳಗುಪ್ಪದ ಮಾರುತಿ ನಗರದಿಂದ ಪಡವಗೋಡು ಸಂಪರ್ಕ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ರಾತ್ರಿ ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಏ.14ರಂದು ಬೆಳಗ್ಗೆ 10.30ಕ್ಕೆ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಾ. ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಇದನ್ನೂ ಓದಿ » ಸಾವಿರ ಸಾವಿರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿಯ ವಿಜೃಂಭಣೆಯ ರಥೋತ್ಸವ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200