ಶಿವಮೊಗ್ಗ ಸ್ಮಾರ್ಟ್‌ ಸಿಟಿಗೆ ಶಾಕ್‌ ನೀಡಿದ ಮಿನಿಸ್ಟರ್‌, ಏನಿದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 3 JANUARY 2024

ಬೆಂಗಳೂರು : ಶಿವಮೊಗ್ಗ ಸೇರಿದಂತೆ ರಾಜ್ಯದ 6 ನಗರಗಳಲ್ಲಿನ ಸ್ಮಾರ್ಟ್‌ ಸಿಟಿ (Smart City) ಯೋಜನೆ ಕಾಮಗಾರಿಗಳ ಕುರಿತು ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಂದರ್ಭ ಸಚಿವರು ಈ ಸೂಚನೆ ನೀಡಿದ್ದಾರೆ.

ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸ್ಮಾರ್ಟ್‌ ಸಿಟಿ ಯೋಜನೆ ಅಡಿಯ ಹಲವು ಕಾಮಗಾರಿಗಳ ತೃಪ್ತದಾಯವಾಗಿಲ್ಲ. ಆದ್ದರಿಂದ ಸ್ವತಂತ್ರ ಸಮಿತಿ ರಚಿಸಿ ತನಿಖೆ ನಡೆಸಬೇಕು. ಮೂರು ತಿಂಗಳ ಒಳಗೆ ವರದಿ ನೀಡಬೇಕು ಎಂದು ಸಚಿವ ಭೈರತಿ ಸುರೇಶ್‌ ಸೂಚಿಸಿದರು.

Minister-Byrathi-Suresh-meeting-at-bangalore.

ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುಪಾತದ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದ 7 ಸ್ಮಾರ್ಟ್‌ ಸಿಟಿಗಳಲ್ಲಿ ಒಟ್ಟು 6415.51 ಕೋಟಿ ರೂ. ವೆಚ್ಚದ ಕಾಮಗಾರಿ ನಡೆದಿದೆ. ಪ್ರತಿ ಸ್ಮಾರ್ಟ್‌ ಸಿಟಿಗೂ ಅಂದಾಜು ರೂ. 990 ಕೋಟಿಗಳ ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿಗಳು ತೃಪ್ತಿದಾಯಕವಾಗಿಲ್ಲ.

ಭೈರತಿ ಸುರೇಶ್‌, ನಗರಾಭಿವೃದ್ಧಿ ಸಚಿವ

RED-LINE-

ಬಹುತೇಕ ರಸ್ತೆ ನಿರ್ಮಾಣ, ಒಳಚರಂಡಿ, ಉದ್ಯಾನವನಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಗಳಿಗೆ ಅನುದಾನವನ್ನು ವೆಚ್ಚ ಮಾಡಲಾಗಿದೆ. ಸ್ಮಾರ್ಟ್‌ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್‌ ನಿಲ್ದಾಣ ಸೇರಿದಂತೆ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ » ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್‌, ಮುಖ್ಯ ಅಭಿಯಂತರ ನಂದೀಶ್‌, 6 ಸ್ಮಾರ್ಟ್‌ ಸಿಟಿಗಳ ವ್ಯವಸ್ಥಾಪಕ ನಿರ್ದೇಶಕರುಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment