SHIVAMOGGA LIVE NEWS, 3 JANUARY 2024
ಬೆಂಗಳೂರು : ಶಿವಮೊಗ್ಗ ಸೇರಿದಂತೆ ರಾಜ್ಯದ 6 ನಗರಗಳಲ್ಲಿನ ಸ್ಮಾರ್ಟ್ ಸಿಟಿ (Smart City) ಯೋಜನೆ ಕಾಮಗಾರಿಗಳ ಕುರಿತು ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಂದರ್ಭ ಸಚಿವರು ಈ ಸೂಚನೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಯೋಜನೆ ಅಡಿಯ ಹಲವು ಕಾಮಗಾರಿಗಳ ತೃಪ್ತದಾಯವಾಗಿಲ್ಲ. ಆದ್ದರಿಂದ ಸ್ವತಂತ್ರ ಸಮಿತಿ ರಚಿಸಿ ತನಿಖೆ ನಡೆಸಬೇಕು. ಮೂರು ತಿಂಗಳ ಒಳಗೆ ವರದಿ ನೀಡಬೇಕು ಎಂದು ಸಚಿವ ಭೈರತಿ ಸುರೇಶ್ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ 50:50 ಅನುಪಾತದ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದ 7 ಸ್ಮಾರ್ಟ್ ಸಿಟಿಗಳಲ್ಲಿ ಒಟ್ಟು 6415.51 ಕೋಟಿ ರೂ. ವೆಚ್ಚದ ಕಾಮಗಾರಿ ನಡೆದಿದೆ. ಪ್ರತಿ ಸ್ಮಾರ್ಟ್ ಸಿಟಿಗೂ ಅಂದಾಜು ರೂ. 990 ಕೋಟಿಗಳ ಅನುದಾನ ಬಿಡುಗಡೆಯಾಗಿದೆ. ಆದರೆ ಕಾಮಗಾರಿಗಳು ತೃಪ್ತಿದಾಯಕವಾಗಿಲ್ಲ. ಭೈರತಿ ಸುರೇಶ್, ನಗರಾಭಿವೃದ್ಧಿ ಸಚಿವ
ಬಹುತೇಕ ರಸ್ತೆ ನಿರ್ಮಾಣ, ಒಳಚರಂಡಿ, ಉದ್ಯಾನವನಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಗಳಿಗೆ ಅನುದಾನವನ್ನು ವೆಚ್ಚ ಮಾಡಲಾಗಿದೆ. ಸ್ಮಾರ್ಟ್ ಶಾಲೆಗಳು, ಆಸ್ಪತ್ರೆ, ಗ್ರಂಥಾಲಯ, ಬಸ್ ನಿಲ್ದಾಣ ಸೇರಿದಂತೆ ಶಾಶ್ವತ ಕಟ್ಟಡಗಳ ನಿರ್ಮಾಣಕ್ಕೆ ಒತ್ತು ನೀಡಬೇಕಾಗಿತ್ತು ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿ » ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್ ಬಾಕ್ಸ್ ರವಾನೆ
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್, ಮುಖ್ಯ ಅಭಿಯಂತರ ನಂದೀಶ್, 6 ಸ್ಮಾರ್ಟ್ ಸಿಟಿಗಳ ವ್ಯವಸ್ಥಾಪಕ ನಿರ್ದೇಶಕರುಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.