ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 DECEMBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಬೆಂಗಳೂರಿನ ಸುಮಾರು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಈ ಮೇಲ್ ಕಳುಹಿಸಲಾಗಿದೆ. ಮಕ್ಕಳ ಸುರಕ್ಷತೆಗೆ ಮೊದಲು ಅದ್ಯತೆ ನೀಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಮಧು ಬಂಗಾರಪ್ಪ, ಬಾಂಬ್ ಬೆದರಿಕೆ ಈ ಮೇಲ್ ವಿಷಯ ತಿಳಿಯುತ್ತಿದ್ದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮಕ್ಕೆ ದೂರವಾಣಿ ಮೂಲಕ ಮಾಹಿತಿ ನೀಡಿದರು.
ಇದನ್ನೂ ಓದಿ – ಫೇಸ್ಬುಕ್ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್, ಆರೋಪಿ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?
ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆ ಜೊತೆಯಾಗಿ ಕೆಲಸ ಮಾಡುತ್ತಿವೆ. ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಇಂತಹ ಬೆದರಿಕೆ ಮೇಲ್ ಕಳುಹಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.