ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 19 NOVEMBER 2020
ಮರಾಠ ಅಭಿವೃದ್ಧಿ ಪ್ರಾಧಿಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಬಳಿಕ ಹಲವು ಸಮುದಾಯಗಳು ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಡ ಹೇರುತ್ತಿವೆ. ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಆರ್ಯ ಈಡಿಗ ಅಭಿವೃದ್ದಿ ನಿಗಮ ಸ್ಥಾಪನೆಗೆ ಮನವಿ ಮಾಡಿದ್ದಾರೆ.
ಹಾಲಪ್ಪ ಅವರ ಮನವಿಯಲ್ಲಿ ಏನಿದೆ?
- 26 ಉಪ ಪಂಗಡಗಳನ್ನು ಹೊಂದಿರುವ ಆರ್ಯ ಈಡಿಗ ಸಮುದಾಯ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ಈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಇದ್ದಾರೆ.
- ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು, ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸೇವೆ, ಸಾಧನೆ ಮಾಡುತ್ತಿದ್ದಾರೆ.
- ವಿಧಾನಸಭೆಯ ಆರು ಸದಸ್ಯರು, ವಿಧಾನ ಪರಿಷತ್‍ನ ಮೂವರು ಈ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಆದರೂ ಆರ್ಯ ಈಡಿಗ ಸಮುದಾಯ ಅತ್ಯಂತ ಹಿಂದುಳಿದಿದ್ದು, ಇದರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮದ ಅಗತ್ಯವಿದೆ. ಹಾಗಾಗಿ ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಶಾಸಕ ಹರತಾಳು ಹಾಲಪ್ಪ ಅವರು ಸಿಎಂಗೆ ಸಲ್ಲಿಸಿದ ಮನವಿಯಲ್ಲಿ ಮನವಿ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422