ನೆಟ್ ವರ್ಕ್ ಸಮಸ್ಯೆ, ಕೇಂದ್ರ ಸಚಿವರಿಗೆ ಹಳ್ಳಿಗಳ ಹೆಸರಿನ ಪಟ್ಟಿ ಸಹಿತ ಮನವಿ, ಯಾವೆಲ್ಲ ಊರಿನ ಹೆಸರಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ | ಜಿಲ್ಲೆಯಲ್ಲಿ ನೆಟ್ ವರ್ಕ್ (NETWORK) ಸಮಸ್ಯೆ ಉಂಟಾಗಿರುವ ಗ್ರಾಮಗಳಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ದೆಹಲಿಯಲ್ಲಿ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಭೇಟಿಯಾಗಿದ್ದರು. ಜಿಲ್ಲೆಯ 80 ಗ್ರಾಮಗಳು ಸೇರಿದಂತೆ ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 96 ಗ್ರಾಮಗಳಲ್ಲಿ ನೆಟ್ ವರ್ಕ್ ಸಮಸ್ಯೆ ಇದೆ. ಇಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸುವಂತೆ ಮನವಿ ಮಾಡಿದರು.

ಸಂಸದರ ಮನವಿಯಲ್ಲಿ ಏನಿದೆ?

ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ 96 ಗ್ರಾಮಗಳಲ್ಲಿ ಮೊಬೈಲ್ ನೆಟ್ ವರ್ಕ್ (NETWORK) ಸಮಸ್ಯೆ ಇದೆ. ದಟ್ಟ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶಗಳಿಂದ ಸುತ್ತುವರಿದ ಕಾರಣ, ಈ ಗ್ರಾಮಗಳಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಉಂಟಾಗಿದೆ. ಈ ಗ್ರಾಮಗಳಲ್ಲಿ ನೆಟ್ ವರ್ಕ್ ಒದಗಿಸಿದರೆ ಜನರಿಗೆ ಅನುಕೂಲ ಉಂಟಾಗಲಿದೆ ಎಂದು ಮನವಿಯಲ್ಲಿ ಸಂಸದ ರಾಘವೇಂದ್ರ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಪೂರೈಕೆಗೆ ಅನುಕೂಲ ಆಗುವಂತೆ ದೂರ ಸಂಪರ್ಕ ಸಾಧನಗಳ ಮೇಲಿನ ತೆರಿಗೆ ಕಡಿತ ಮಾಡಬೇಕು.ಇದರಿಂದ ಸೇವೆ ಒದಗಿಸುವ ಕಂಪನಿಗಳಿಗೂ ಅನೂಕಲವಾಗಲಿದೆ. ಇನ್ನು, ಶಿವಮೊಗ್ಗ ಜಿಲ್ಲೆಯ ಶೇ.40ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಇಂಟರ್ ನೆಟ್ ಸಂಪರ್ಕ ಸಮರ್ಪಕವಾಗಿಲ್ಲ. ಇದರಿಂದ ಗ್ರಾಮ ಪಂಚಾಯಿತಿ ಕಾರ್ಯಕ್ಷಮತೆಗೆ ಸಮಸ್ಯೆ ಉಂಟಾಗುತ್ತಿದೆ ಎಂದು ತಿಳಿಸಿದ್ದಾರೆ.

ಗ್ರಾಮಗಳ ಪಟ್ಟಿ ಹಸ್ತಾಂತರ

ಶಿವಮೊಗ್ಗ ಜಿಲ್ಲೆಯ 80 ಗ್ರಾಮಗಳು, ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಉಡುಪಿ ಜಿಲ್ಲೆಯ 16 ಗ್ರಾಮಗಳಲ್ಲಿ ನೆಟ್ ವರ್ಕ್ ಸಮಸ್ಯೆ ಇದೆ. ಈ ಗ್ರಾಮಗಳ ಪಟ್ಟಿಯನ್ನು ದೂರ ಸಂಪರ್ಕ ಸಚಿವರಿಗೆ ಸಂಸದ ರಾಘವೇಂದ್ರ ಹಸ್ತಾಂತರ ಮಾಡಿದರು.

ಹೊಸನಗರ ತಾಲೂಕು
ಅಂದಗೊಳಿ, ಬಸವಾಪುರ, ಬೇಗದಳ್ಳಿ, ಬೇಳೂರು, ಬ್ರಾಹ್ಮಣತರುವೆ, ಬೈದೂರು, ದೊಬ್ಯಾಳು, ಗಿಣಿಕಲ್, ಗುಬ್ಬಿಗ, ಗುಡೋಡಿ, ಹಳೆ ತೋಟ, ಹೊಳಗೋಡು, ಹೊರೊಯತಿಗೆ, ಕಳಸೆ, ಕಾನಗೋಡು, ಕರಿಗಲ್ಲು, ಕಟ್ಟೆಕೊಪ್ಪ, ಕಟ್ಟಿನಹೊಳೆ, ಕೆ.ಹೊನ್ನೆಕೊಪ್ಪ, ಕಿಲಂದೂರು ಜಂಗಲ್, ಕೊಳವಾಡಿ, ಕೊರನಕೋಟೆ, ಮಾಗೋಡಿ, ಮಳಲಿ, ಮನಸೆಟ್ಟೆ, ಮಸ್ಕಾನಿ, ನೀಲಕಂಠನ ತೋಟ, ನೆಲಗಳಲೆ, ಪಿ.ಕಲ್ಲುಕೊಪ್ಪ, ರಾವೆ, ತೋಟದ ಕೊಪ್ಪ, ಉಳ್ತಿಗ
ಸಾಗರ ತಾಲೂಕು
ಬಾಳಿಗೆ, ಬರುವೆ, ಬೊಬ್ಬಿಗೆ, ಬ್ರಾಹ್ಮಣ ಇಳಕಳಲೆ, ಚದರವಳ್ಳಿ, ಚಿಮ್ಲೆ, ಹೆದಾತ್ರಿ, ಹೊನಗಲ್ಲು, ಕಗರಸು, ಕಲ್ಲೂರು, ಕನಪಗಾರು, ಕಣ್ಣೂರು, ಕಾರಣಿ, ಕಟ್ಟಿನಕಾರು, ಕಿರುವಾಸೆ, ಕೊಪ್ಪರಿಗೆ, ಮಾಳೂರು, ಮರಾಟಿ, ಮುಳ್ಳಕೆರೆ, ಮುಪ್ಪಾನೆ, ನಾಡಕೆಪ್ಪಿಗೆ, ನೆಲಹರಿ, ಶಿರಗಳಲೆ ಅವಡೆ, ತಳಗೋಡು, ಉರುಳಗಲ್ಲು, ವಾಲೂರು
ಶಿವಮೊಗ್ಗ ತಾಲೂಕು
ಚಿತ್ರಶೆಟ್ಟಿ ಹಳ್ಳಿ, ಕೋಣೆ ಹೊಸೂರು, ಕುಡಗಲ ಮನೆ, ಮಲೆ ಶಂಕರ, ಶೆಟ್ಟಿ ಹಳ್ಳಿ, ಸಿದ್ದಮ್ಮಾಜಿ ಹೊಸೂರು
ತೀರ್ಥಹಳ್ಳಿ ತಾಲೂಕು
ಅಲಸೆ, ಬಸವನಗದ್ದೆ, ಬೊಮ್ಮನಹಳ್ಳಿ, ಚಕ್ಕೊಡಬೈಲು, ಗರಗ, ಹೆಗಲತ್ತಿ, ಹಿರೇಬೈಲು, ಹುರುಳಿ, ಕಿಕ್ಕೇರಿ, ಕೊಂಬಿನಕೈ, ನೇರಲಮನೆ, ಶುಂಠಿಹಕ್ಲು, ಟೆಂಕಬೈಲು, ತೋಟದಕೊಪ್ಪ, ಯೋಗಿಮಳಲಿ

ಈ ಗ್ರಾಮಗಳಲ್ಲಿ ಮೊಬೈಲ್ ನೆಟ್ ವರ್ಕ್ ಒದಗಿಸುವಂತೆ ಸಂಸದ ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಇದಕ್ಕೆ ಸಚಿವ ಅಶ್ವಿನಿ ವೈಷ್ಣವ್ ಅವರು ಪೂರಕವಾಗಿ ಸ್ಪಂದಿಸಿದ್ದಾರೆ.

ಇದನ್ನೂ ಓದಿ – ಶೋ ರೂಂನಲ್ಲಿ 2 ಐಫೋನ್’ಗಳು ನಾಪತ್ತೆ, ಸಿಸಿಟಿವಿಯಿಂದ ಹೊರಬಿತ್ತು ಸತ್ಯ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment