ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 MAY 2024
RAINFALL NEWS : ರಾಜ್ಯಾದ್ಯಂತ ಮಳೆ (RAINFALL) ಮುಂದುವರಿದಿದೆ. ಆದರೆ ಆರ್ಭಟ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಐದು ದಿನ ಸಾಧಾರಣ ಮಳೆಯಾಗಲಿದೆ. ಇನ್ನೊಂದೆಡೆ ಮುಂಗಾರು ಇನ್ನಷ್ಟು ವ್ಯಾಪಿಸಲು ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಸಾಧಾರಣ ಮಳೆ
ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮೇ 23, 24ರಂದು ಮತ್ತು ಮೈಸೂರಿನಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೊಂದೆಡೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮೇ 27ರವರೆಗೆ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮುಂಗಾರು ವ್ಯಾಪಕಗೊಳ್ಳಲ್ಲಿದೆ
ಇತ್ತ ಮುಂಗಾರು ವ್ಯಾಪಕಗೊಳ್ಳಲು ಅನುಕೂಲಕರ ಪರಿಸ್ಥಿತಿ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಮಾನ್ಸೂನ್ ಮತ್ತಷ್ಟು ವ್ಯಾಪಿಸಲಿದೆ. ಈ ವಾರಾಂತ್ಯದಲ್ಲಿ ಅದು ಕೇರಳ ಪ್ರವೇಶಿಸಲಿದೆ. ಆದಾಗಿ ಎರಡ್ಮೂರು ದಿನದಲ್ಲಿ ಮುಂಗಾರು ರಾಜ್ಯ ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿದೆ. ಈ ಮಧ್ಯೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಆದರೆ ಇದು ಮುಂಗಾರಿನ ಮೇಲೆ ಯಾವುದೆ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ – ನಡು ದಾರಿಯಲ್ಲೆ ಡಿಸೇಲ್ ಖಾಲಿಯಾಗಿ ನಿಂತ KSRTC ಬಸ್, ಮಳೆಯಲ್ಲಿ ಪ್ರಯಾಣಿಕರ ಪರದಾಟ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















