ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ಕರ್ಫ್ಯೂ ನಿಯಮ ಉಲ್ಲಂಘಿಸಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡುವ ಪ್ರಕ್ರಿಯೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಲಾಕ್ ಡೌನ್ ಮುನ್ನಾ ದಿನ ಮುನ್ನೂರಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಿದ್ದಾರೆ.
ಅಮೀರ್ ಅಹಮದ್ ಸರ್ಕಲ್‍ನಲ್ಲೇ ಹೆಚ್ಚು
ದೊಡ್ಡಪೇಟೆ ಠಾಣೆ ಪೊಲೀಸರು ಅಮೀರ್ ಅಹಮದ್ ಸರ್ಕಲ್‍ನಲ್ಲಿ ಕಾರ್ಯಾಚರಣೆ ನಡೆಸಿ, ಅನಗತ್ಯವಾಗಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಿದ್ದಾರೆ. ಇನ್ಸ್‍ಪೆಕ್ಟರ್‍ಗಳಾದ ಹರೀಶ್ ಪಟೇಲ್ ಮತ್ತು ಗುರುರಾಜ್ ಕರ್ಕಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ಸುಮಾರು 75 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಮುನ್ನೂರಕ್ಕೂ ಹೆಚ್ಚು ಸೀಜ್
ಜಿಲ್ಲೆಯಾದ್ಯಂತ ಇವತ್ತು 318 ವಾಹನಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ 297 ದ್ವಿಚಕ್ರ ವಾಹನ, 7 ಆಟೋಗಳು, 14 ಕಾರುಗಳಿವೆ. ಇನ್ನು, ಮೋಟರ್ ವೆಹಿಕಲ್ ಕಾಯ್ದೆ ಉಲ್ಲಂಘಿಸಿದ 189 ಪ್ರಕರಣಗಳನ್ನು ದಾಖಲು ಮಾಡಿ, 86,600 ರೂ. ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಲಾಕ್‌ಡೌನ್, ಪೊಲೀಸರಿಗೆ ಪೂರ್ಣ ಜವಾಬ್ದಾರಿ, ರೂಪುರೇಷೆ ರೆಡಿ
ಮತ್ತೊಂದೆಡೆ ನಿಯಮ ಬಾಹಿರವಾಗಿ ವ್ಯಾಪಾರ ನಡೆಸಿದ ಆರೋಪದ ಮೇಲೆ ಎರಡು ಅಂಗಡಿ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಠಾಣೆ ಮತ್ತು ಭದ್ರಾವತಿ ಓಲ್ಡ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422