ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021
ಶಿವಮೊಗ್ಗ – ತುಮಕೂರು ಚತುಷ್ಪಥ ರಸ್ತೆ ಕಾಮಗಾರಿಯ 4ನೇ ಪ್ಯಾಕೇಜ್ನ ಭೂಸ್ವಾಧೀನಕ್ಕೆ ಅಗತ್ಯವಿರುವ ಹಣವನ್ನು ಕೂಡಲೆ ಬಿಡುಗಡೆ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು.
ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದ ಸಂಸದ ಬಿ.ವೈ.ರಾಘವೇಂದ್ರ, ಚತುಷ್ಪಥ ರಸ್ತೆಯ 4ನೇ ಪ್ಯಾಕೇಜ್ ಬೆಟ್ಟದಹಳ್ಳಿಯಿಂದ ಶಿವಮೊಗ್ಗದವರೆಗೆ ಭೂ ಸ್ವಾಧೀನಕ್ಕೆ ಅಗತ್ಯವಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಿ, ಕಾಮಗಾರಿಯನ್ನು ಶೀಘ್ರದಲ್ಲಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದರು.
ಇದನ್ನು ಕ್ಲಿಕ್ ಮಾಡಿ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಶಿವಮೊಗ್ಗ ರಿಂಗ್ ರಸ್ತೆಗೆ ಹಣ
ಶಿವಮೊಗ್ಗದ ಹೊರ ವರ್ತುಲ ರಸ್ತೆಯ 15 ಕಿ.ಮೀಗೆ ಸಂಬಂಧಿಸಿದಂತೆ ಭೂಸ್ವಾಧೀನ ವೆಚ್ಚದ ಶೇ.50ರಷ್ಟನ್ನು ರಾಜ್ಯ ಸರ್ಕಾರ ಭರಿಸುತ್ತಿದೆ. ಕೇಂದ್ರದ ಪಾಲಿನ ಹಣವನ್ನು ಬಿಡುಗಡೆ ಮಾಡಬೇಕು ಎಂದೂ ಸಂಸದ ರಾಘವೇಂದ್ರ ಮನವಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಎಂಜಿನಿಯರ್ ಪೀರ್ ಪಾಷಾ ಉಪಸ್ಥಿತರಿದ್ದರು.
ಸಾಗರದಲ್ಲಿ ಕಲ್ಚರಲ್ ಸೆಂಟರ್
ಮತ್ತೊಂದೆಡೆ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರನ್ನು ಭೇಟಿಯಾದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ಜಿಲ್ಲೆಯಲ್ಲಿ ಸೈನ್ಸ್ ಲ್ಯಾಬ್, ಸಾಗರ ತಾಲೂಕಿನಲ್ಲಿ ರವೀಂದ್ರನಾಥ ಟ್ಯಾಗೋರ್ ಕಲ್ಚರಲ್ ಸೆಂಟರ್ ನಿರ್ಮಾಣ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422