ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಅನುಷ್ಠಾನಕ್ಕೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಅರಣ್ಯ ಸಚಿವ (Forest Minister) ಈಶ್ವರ ಖಂಡ್ರೆ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ಇದನ್ನೂ ಓದಿ » ಕಾಶ್ಮೀರ ದಾಳಿ, ಸಾಂತ್ವನ ಹೇಳಲು ತಿಪಟೂರಿನಿಂದ ಶಿವಮೊಗ್ಗಕ್ಕೆ ಬಂದ 103 ವರ್ಷದ ವೃದ್ಧೆ

ಶಿವಮೊಗ್ಗದ ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯದ ಸೀಮಾರೇಖೆಯ ಮರು ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸುವಂತೆ ಕೋರಿದರು.

ಶಿವಮೊಗ್ಗ ನಗರದ ಆರ್ಥಿಕ, ಸಾಮಾಜಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಶೆಟ್ಟಿಹಳ್ಳಿ ಅಭಯಾರಣ್ಯದ ವ್ಯಾಪ್ತಿಯ ಪರಿಸರ ಸೂಕ್ಷ್ಮ ಪ್ರದೇಶವನ್ನು 1 ಕಿ.ಮೀಗೆ ಇಳಿಸಲು ಅನುಮತಿಸಲಾಗಿದೆ ಎಂದು ರಾಘವೇಂದ್ರ ಹೇಳಿದರು.

BY-Raghavendra-meets-forest-minister-Eshwar-Khandre

ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಶರಾವತಿ ಸಂತ್ರಸ್ತರಲ್ಲಿ ನಿಜವಾದ ಭೂ ಅನುಭವದಾರರನ್ನು ಗುರುತಿಸಿ ಪಟ್ಟಿ ಕಳುಹಿಸಿಕೊಡುವಂತೆ ಹಾಗೂ ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯ, ಹುಲಿ-ಸಿಂಹಧಾಮದ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ನೀಡುವಂತೆ ಅರಣ್ಯ ಸಚಿವರಿಗೆ ಮನವಿ ಮಾಡಿದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2025

Leave a Comment