ಶಿವಮೊಗ್ಗ ಲೈವ್
ಶಿವಮೊಗ್ಗ: ಇನ್ನೊಂದು ವಾರದಲ್ಲಿ ಸಿಗಂದೂರು ಸೇತುವೆ (Bridge) ಉದ್ಘಾಟನೆಯ ದಿನಾಂಕ ನಿಗದಿಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 35 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಂಸದ ರಾಘವೇಂದ್ರ, ಸಿಗಂದೂರು ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿ ಪಡಿಸುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಉದ್ಘಾಟನಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ಮೊದಲ ಲೋಡ್ ಟೆಸ್ಟ್ ಪಾಸ್, ಏನಿದು ಪರೀಕ್ಷೆ? ಹೇಗೆ ನಡೆಯುತ್ತೆ?
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ನವೀನ ತಂತ್ರಜ್ಞಾನ ಹಾಗೂ ಆಧುನಿಕ ತಾಂತ್ರಿಕ ವ್ಯವಸ್ಥೆಯಿಂದ ಅತ್ಯಂತ ಅಚ್ಚುಕಟ್ಟಾಗಿ ಸುಮಾರು ₹430 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಿಸಲಾಗಿದೆ. ರಾಜ್ಯದ ಅತಿ ಉದ್ದದ 2.25 ಕಿ.ಮೀ ಕೇಬಲ್ ಆಧಾರಿತ ಸೇತುವೆ ಕಾಮಗಾರಿ ಇದಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.


