ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MARCH 2021
ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರುಜ್ಜೀವನಗೊಳಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದ್ದಾರೆ.
ನವದೆಹಲಿಯಲ್ಲಿ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಸಲ್ಲಿಸಿದರು.
ಸಂಸದರ ಮನವಯಲ್ಲಿ ಏನಿದೆ?
ಭದ್ರಾವತಿಯಲ್ಲಿ ಸ್ಥಗಿತಗೊಂಡಿರುವ ಕಾರ್ಖಾನೆಯು ಹೆಚ್ಚಿನ ಮೌಲ್ಯವುಳ್ಳ ಆತ್ಯಾಧುನಿಕ ಉಕ್ಕು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಕೈಗಾರಿಕೆಯನ್ನು ಲಾಭದಾಯಕವಾಗಿ ನಡೆಸಲು ಇನ್ನಷ್ಟು ಅತ್ಯಾಧುನಿಕ ಯಂತ್ರೋಪಕರಣ, ವಿವಿಧ ಸೌಲಭ್ಯಗಳ ಅಗತ್ಯವಿದೆ.
ಆಧುನಿಕ ವ್ಯವಸ್ಥೆಗೆ ಪೂಕರವಾಗಿ ವಿಐಎಸ್‍ಎಲ್ ಕಾರ್ಖಾನೆ ನವೀಕರಿಸಿ, ಸಿಂಟರ್ ಪ್ಲಾಂಟ್, ಕೋಕ್ ಓವನ್ ಹಾಗೂ ಆಧುನೀಕರಿಸಿದ ಸ್ಟೀಲ್ ಕರಗುವ ಘಟಕ ಸೌಲಭ್ಯಗಳನ್ನು ನೀಡಬೇಕು. ಪ್ರತಿಸ್ಪರ್ಧಿಗಳ ಮಟ್ಟಕ್ಕೆ ವಿಐಎಸ್ಎಲ್ ಕಾರ್ಖಾನೆಯನ್ನು ಕೊಂಡೊಯ್ಯಬೇಕು.
ಖಾಸಗಿ ಬಂಡವಾಳಗಾರರನ್ನು ಆಕರ್ಷಿಸಿ ವಿಐಎಸ್‍ಎಲ್ ಕರ್ಖಾನೆಯನ್ನು ಪುನಾರಂಭ ಮಾಡಬೇಕು.
ಶಿವಮೊಗ್ಗದಲ್ಲಿ ಉದ್ಯೋಗ ಸೃಷ್ಟಿಗೆ ಮನವಿ
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್.ಇ.ಡಿ. ಬಲ್ಬ್, ಟೆಕ್ಸ್‍ಟೈಲ್ ಪಾರ್ಕ್, ಆಹಾರ ಸಂಸ್ಕರಣಾ ಘಟಕಗಳು ಮತ್ತು ಇ.ಎಸ್.ಡಿ.ಎಂ. (Electronics System Design & Manufacturing) ಕೈಗಾರಿಕಾ ಕೇಂದ್ರಗಳ ಮೂಲಕ ಉದ್ಯೋಗ ಸೃಷ್ಟಿ ಮಾಡುವಂತೆಯೂ ಸಂಸದ ರಾಘವೇಂದ್ರ ಮನವಿ ಮಾಡಿದ್ದಾರೆ.
ಮನವಿ ಸ್ವೀಕರಿಸಿದ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರು, ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422