ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

Published On : ಜನವರಿ 28, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜನವರಿ 30 ರಂದು ಬೆಳಗ್ಗೆ 10.30ಕ್ಕೆ ನೆಹರು ರಸ್ತೆಯ ಶಿವಪ್ಪನಾಯಕ ಸಂಕೀರ್ಣದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣದಲ್ಲಿ MSMEಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ (workshop) ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಭುವನೇಶ್ವರಿ ಸಿ. ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ – ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್‌ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 28, 2026

Leave a Comment