ಶಿವಮೊಗ್ಗ: ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ವತಿಯಿಂದ ಈಡಿಗ, ಬಿಲ್ಲವ, ದೀವರ, ನಾಮಧಾರಿ ಸೇರಿದಂತೆ ವಿವಿಧ ಸೋದರ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಡಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. (ಈ ಸುದ್ದಿಯನ್ನು ಇನ್ನು 46 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಯೋಜನೆಗಳ ವಿವರ
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು – ಶೈಕ್ಷಣಿಕ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ (https://sevaone.karnataka.gov.in) ಮೂಲಕ ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಡಿಸೆಂಬರ್ 13 ರೊಳಗಾಗಿ ಆನ್ಲೈನ್ ಅರ್ಜಿ ಸಲ್ಲಿಸಬೇಕು.

ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ನಿಗಮದ ಅಧಿಕೃತ ವೆಬ್ಸೈಟ್ (https://dbcdc.karnataka.gov.in) ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ (ದೂರವಾಣಿ ಸಂಖ್ಯೆ: 08182-229634) ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.